ಶಿರ್ವ: ಹೊನ್ನಾವರದಲ್ಲಿ ಕಾರು ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರೊಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್ (40) ಮೃತಪಟ್ಟವರು. ಅನಂತೇಶ ರಾವ್ ಅವರು ಸೋದೆ ಮೂಲ ಮಠಕ್ಕೆ ಉಡುಪಿಯಿಂದ ತೆರಳುತ್ತಿದ್ದರು. ಈ ವೇಳೆ ಹೊನ್ನಾವರ ಬಳಿ ಅವರ ಕಾರು ಕಂಟೈನರ್‌ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಗಳೂರಿನಲ್ಲಿ ವಾಸವಾಗಿದ್ದ ಅನಂತೇಶ ರಾವ್ ಅವರು ಪತ್ನಿ ಮಂಗಳೂರು ಎಂ.ವಿ. ಶೆಟ್ಟಿ ಎಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನ ಪ್ರಾಂಶುಪಾಲೆ ಶ್ರೀಪ್ರಿಯಾ ಅನಂತೇಶ್ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.
ಇನ್ನು ಮೃತರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಕಾರ್ಯದರ್ಶಿ ರತ್ನಕುಮಾರ್, ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್, ಉಪ ಪ್ರಾಂಶುಪಾಲ ಡಾ| ಗಣೇಶ್ ಐತಾಳ್ ಸಂತಾಪ ಸೂಚಿಸಿದ್ದಾರೆ.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…