Featured

ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣ – ಇಷ್ಟೊಂದು ದೊಡ್ಡ ಘಟನೆ ನಡೆದಿದ್ದರೂ ಕುಂದಾಪುರ ಶಾಂತವಾಗಿದೆ ; ಈ ಮೌನ ಒಳ್ಳೇಯದಲ್ಲ : ಶರಣ್ ಪಂಪ್‍ವೆಲ್  – Vishwanews24

ಇಂತಹ ಗಂಭೀರ ಪ್ರಕರಣದ ವಿರುದ್ದ ಕುಂದಾಪುರದ ಹಿಂದೂ ಸಮಾಜ ಸೆಟೆದು ನಿಂತು ರಸ್ತೆಗಿಳಿದು ಪ್ರತಿಭಟಿಸಬೇಕಿತ್ತು ..

ಇಷ್ಟೊಂದು ದೊಡ್ಡ ಘಟನೆ ನಡೆದಿದ್ದರೂ ಕುಂದಾಪುರ ಶಾಂತವಾಗಿದೆ..

ಈ ರೀತಿಯ ದೌರ್ಜನ್ಯ ನಡೆಯಬಾರದು ಎಂದಾದರೆ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲೇಬೇಕು..

ಶಿಲ್ಪಾ ಸಾವಿನ ನ್ಯಾಯಕ್ಕಾಗಿ ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯಲ್ಲಿ ಶರಣ್ ಪಂಪ್‍ವೆಲ್

ಕುಂದಾಪುರ: ಭಯೋತ್ಪಾದಕ ಜಿಹಾದಿ ಅಜೀಜ್‍ನ ಮೋಸದ ಷಡ್ಯಂತರಕ್ಕೆ ಹಿಂದೂ ಯುವತಿ ಶಿಲ್ಪಾ ಬಲಿಯಾಗಿರುವುದು ಖೇದಕರ. ಇಷ್ಟೊಂದು ದೊಡ್ಡ ಘಟನೆ ನಡೆದಿದ್ದರೂ ಕುಂದಾಪುರ ಶಾಂತವಾಗಿದೆ. ಓರ್ವ ಹಿಂದೂ ಹೆಣ್ಣು ಮಗಳು ಮುಸ್ಲಿಂ ಯುವಕನ ದೌರ್ಜನ್ಯಕ್ಕೆ ಕುಗ್ಗಿ ಸಾವನ್ನಪ್ಪಿದ್ದಾಳೆ ಎಂದಾದರೂ ಯಾರೂ ಮಾತನಾಡುವ ಸ್ಥಿತಿಯಲ್ಲಿಲ್ಲ. ಖಂಡಿತವಾಗಿಯೂ ಈ ಮೌನ ಕುಂದಾಪುರಕ್ಕೆ ಒಳ್ಳೇಯದಲ್ಲ. ಇಂತಹ ಗಂಭೀರ ಪ್ರಕರಣದ ವಿರುದ್ದ ಕುಂದಾಪುರದ ಹಿಂದೂ ಸಮಾಜ ಸೆಟೆದು ನಿಂತು ರಸ್ತೆಗಿಳಿದು ಪ್ರತಿಭಟಿಸಬೇಕಿತ್ತು ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ಹೇಳಿದರು.

ಶಾಸ್ತ್ರಿ ಸರ್ಕಲ್ ಬಳಿಯಲ್ಲಿ ಮಂಗಳವಾರ ಸಂಜೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕುಂದಾಪುರ ಪ್ರಖಂಡ ವತಿಯಿಂದ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಉಪ್ಪಿನಕುದ್ರು ಯುವತಿ ಶಿಲ್ಪಾ ಸಾವಿನ ನ್ಯಾಯಕ್ಕಾಗಿ ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಆರು ವರ್ಷಗಳಿಂದ ಆರೋಪಿ ಪ್ರೀತಿ ಪ್ರೇಮದ ನಾಟಕವಾಡಿ ಅಶ್ಲೀಲ Photoಗಳನ್ನು ತೆಗೆದು ಶಿಲ್ಪಾಳನ್ನು ಬ್ಲಾಕ್‍ಮೇಲ್ ಮಾಡಿ ಅವಳನ್ನು ಮಾನಸಿಕವಾಗಿ ಕುಗ್ಗುವಂತೆ ಮಾಡಿದ್ದಾನೆ. ಇದು ಆತ್ಮಹತ್ಯೆ ಅಲ್ಲ. ಇದೊಂದು ವ್ಯವಸ್ಥಿತವಾದ ಕೊಲೆ. ಇಂದು ಶಿಲ್ಪಾ ದೇವಾಡಿಗ ಎಂದು ಸುಮ್ಮನಾದರೇ ನಾಳೆ ಲವ್ ಜಿಹಾದ್ ನಮ್ಮ ಮನೆಯ ಅಂಗಳಕ್ಕೆ ಬರುತ್ತದೆ. ಈ ರೀತಿಯ ದೌರ್ಜನ್ಯ ನಡೆಯಬಾರದು ಎಂದಾದರೆ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲೇಬೇಕು. ಕಳೆದ 20 ವರ್ಷಗಳಿಂದ ಹಿಂದೂ ಸಂಘಟನೆಗಳು ಲವ್ ಜಿಹಾದ್ ವಿರುದ್ದ ಸಾಕಷ್ಟು ಪ್ರತಿಭಟನೆಗಳನ್ನು ಮಾಡುತ್ತಿದ್ದರೂ,ಇಂದಿಗೂ ಲವ್ ಜಿಹಾದ್ ನಿಂತ ಲಕ್ಷಣ ಕಾಣುತ್ತಿಲ್ಲ ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

4 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago