ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ ಅತಿರೇಕ ಎನಿಸಿ ಕಲಾವಿದರಿಗೆ ಕೋಪ ತರಿಸಿದ ಪ್ರಸಂಗಗಳೂ ಇವೆ. ಅಂಥದ್ದೇ ಪ್ರಸಂಗವೊಂದು ಕುಂದಾಪುರದಲ್ಲಿ ನಡೆದಿದೆ. ಇತ್ತೀಚೆಗೆ ಧರ್ಮಸ್ಥಳ ಮೇಳದ ಕಲಾವಿದ ಉಜಿರೆ ಅಶೋಕ್ ಭಟ್ ಅವರು ಬಿಗಿಲು (ಶಿಳ್ಳೆ) ಹಾಕಿದ ಪ್ರೇಕ್ಷಕನನ್ನು ರಂಗಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.
ಮಾ. 25ರಂದು ಮೇಳದ ಯಕ್ಷ ಗಾನ ಕುಂದಾಪುರದ ಹೆನ್ನಬೈಲು ಬಕ್ರ ಮನೆ ಎಂಬಲ್ಲಿ ನಡೆದಿತ್ತು. ಶ್ರೀಕೃಷ್ಣ ಪಾರಿಜಾತ, ನರಕಾಸುರ ಮೋಕ್ಷ ಪ್ರಸಂಗದಲ್ಲಿ ಭಾಗವತರು ಪದ್ಯ ಹೇಳಿದ ಬಳಿಕ ಪ್ರೇಕ್ಷಕ ವಲಯದಿಂದ ಶಿಳ್ಳೆ ಕೇಳಿ ಬಂದಿತು. ಈ ವೇಳೆ ಕೋಪಗೊಂಡ ಶ್ರೀಕೃಷ್ಣ ಪಾತ್ರಧಾರಿ ಉಜಿರೆ ಅಶೋಕ್ ಭಟ್ ಶಿಳ್ಳೆ ಹಾಕಿದ ಪ್ರೇಕ್ಷಕನನ್ನು ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಕಲಾವಿದ ಉಜಿರೆ ಅಶೋಕ್ ಭಟ್ “ಪ್ರೈಮರಿ, ಹೈಸ್ಕೂಲ್ ವಿದ್ಯಾರ್ಥಿಗಳಂತೆ ಕಾಣಿಸುವ ಸುಮಾರು ಹತ್ತು ಮಂದಿ ಹುಡುಗರ ತಂಡ ಯಕ್ಷಗಾನ ಶುರು ಆದಾಗಿನಿಂದಲೇ ಅಂಗಡಿಯಲ್ಲಿ ಸಿಗುವ ಬಿಗಿಲು ಊದುತ್ತಿತ್ತು. ಆ ಶಬ್ದ ಕಿರಿಕಿರಿ ಉಂಟು ಮಾಡುತ್ತಿತ್ತು. ಕಲಾವಿದರು ಸಹಿಸಿಕೊಂಡಿದ್ದರು. ಅತಿ ಎನಿಸಿದಾಗ, ನಾನು ಪ್ರೇಕ್ಷಕ ಹೇಗೆ ಇರಬೇಕೆಂದು ಬುದ್ದಿ ಹೇಳಿದ್ದೇನೆ. ನಾನು ಮಾತ್ರ ಅಲ್ಲ. ಅಲ್ಲಿದ್ದ ಇತರ ಪ್ರೇಕ್ಷಕರೂ ಅವರಿಗೆ ಬೈದಿದ್ದರು. ಪ್ರೇಕ್ಷಕನಿಗೆ ಕಲಾವಿದನ ಅಭಿನಯ ಖುಷಿ ಆದಲ್ಲಿ ಆತ ನಿರ್ಗಮಿಸುವ ವೇಳೆ ಚಪ್ಪಾಳೆ ತಟ್ಟಬೇಕು. ವೇದಿಕೆಯಲ್ಲಿ ಇರುವಾಗ, ವೇದಿಕೆ ಏರುವಾಗ ಅದು ಸಮಂಜಸ ಅಲ್ಲ. ಹಿಂದೆ ಶೇಣಿ ಗೋಪಾಲಕೃಷ್ಣ ಭಟ್ ಹಾಗೂ ಇತರ ಹಿರಿಯ ಕಲಾವಿದರು ಇಂತಹ ವರ್ತನೆ ವಿರುದ್ಧ ರಂಗಸ್ಥಳದಲ್ಲೇ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದರು” ಎಂದು ಸಮರ್ಥಿಸಿಕೊಂಡಿದ್ದಾರೆ.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…