Featured

ಶಿವಕುಮಾರ ಸ್ವಾಮೀಜಿಗಳ 115 ಜನ್ಮದಿನ : ಸಿದ್ದಗಂಗಾ ಮಠದಲ್ಲಿ  ಶ್ರೀಗಳ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿದ ಅಮಿತ್‌ ಶಾ – Vishwanews24

ಶಿವಕುಮಾರ ಸ್ವಾಮೀಜಿಗಳ 115 ಜನ್ಮದಿನ : ಸಿದ್ದಗಂಗಾ ಮಠದಲ್ಲಿ  ಶ್ರೀಗಳ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿದ ಅಮಿತ್‌ ಶಾ – Vishwanews24

ತುಮಕೂರು: ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವ ಹಿನ್ನೆಲೆ ತುಮಕೂರಿನಲ್ಲಿರುವ ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದ್ದಾರೆ.

ತುಮಕೂರು ವಿವಿಯ ಹೆಲಿಪ್ಯಾಡಲ್ಲಿ ಇಳಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆಗರ ಜ್ಞಾನೇಂದ್ರ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಹೂಗುಚ್ಛ ನೀಡಿ ಸ್ವಾಗತಿಸಿದರು.

ನಂತರ ಕಾರಿನ ಮೂಲಕ ರಸ್ತೆ ಮಾರ್ಗವಾಗಿ ಸಿದ್ದಗಂಗಾ ಮಠಕ್ಕೆ ಆಗಮಿಸಿದ ಅಮಿತ್ ಶಾ ಅವರು, ಶ್ರೀಗಳ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸಿದ್ದಗಂಗಾ ಮಠದಲ್ಲಿ ನಡೆದಾಡುವ ದೇವರ ಬಸವ ಭಾರತ ಹೆಸರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಖೂಬಾ, ಸಂಸದ ಜಿ.ಎಸ್.ಬಸವರಾಜ್ ಹಾಗೂ ಸಿದ್ದಗಂಗಾ ಮಠದ ಸಿದ್ದಲಿಂಗೇಶ್ವರ ಸ್ವಾಮೀಜಿ ಸೇರಿದಂತೆ ಹಲವಾರು ಸಾಧು ಸಂತರು ಭಾಗವಹಿಸಿದ್ದರು. ಅಲ್ಲದೇ ವೇದಿಕೆ ಮುಂಭಾಗದಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು 10 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿತ್ತು.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

4 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

6 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

6 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

6 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

7 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

7 hours ago