ತುಮಕೂರು: ನಡೆದಾಡುವ ದೇವರು ಎಂದೇ ಜನಾನುರಾಗಿಯಾಗಿದ್ದ ಲಿಂಗೈಕ್ಯ ಡಾ.ಶ್ರೀ,ಶ್ರೀ ಶಿವಕುಮಾರ ಮಹಾಸ್ವಾಮಿಗಳ 112ನೇ ಜಯಂತಿ ಹಿನ್ನೆಲೆಯಲ್ಲಿ ಸೋಮವಾರ ತುಮಕೂರು ಸಿದ್ದಗಂಗಾಕ್ಷೇತ್ರದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿಯವರು ಶಿವಕುಮಾರ ಸ್ವಾಮೀಜಿ ಅವರ ಗುರುಗಳಾದ ಉದ್ಧಾನಶ್ರೀಗಳ ಗದ್ದುಗೆಗೆ ನಂತರ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ನೆರವೇರಿಸಿದರು.
ಬೆಳಿಗ್ಗೆ ಸ್ವಾಮೀಜಿ ಪ್ರತಿಮೆ ಮೆರವಣಿಗೆ ನಡೆಸಲಾಯಿತು. ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.
ಲಿ.|ಸಿದ್ದಗಂಗಾಶ್ರೀಗಳ 112ನೇ ಜಯಂತಿ ಹಿನ್ನೆಲೆಯಲ್ಲಿ ಮಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದುಬರುತ್ತಿದ್ದು, ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದಾರೆ.ಮಠದಲ್ಲಿ 112 ಶಿಶುಗಳಿಗೆ ಶಿವಕುಮಾರಶ್ರೀಗಳ ನಾಮಕರಣ ನಡೆಯಿತು.
ಗದ್ದುಗೆ ಮುಂಭಾಗ ವಿಭೂತಿ, ರುದ್ರಾಕ್ಷಿ ಹಾಗೂ ಧಾನ್ಯಗಳಿಂದ ಶ್ರೀಗಳ ಭಾವಚಿತ್ರ ಬಿಡಿಸಲಾಗಿತ್ತು. ಗದ್ದುಗೆಯನ್ನು ವಿವಿಧ ಪುಪ್ಪಗಳಿಂದ ಅಲಂಕರಿಸಲಾಗಿತ್ತು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…