Featured

ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆ : ಅರಣ್ಯ ಇಲಾಖೆಯಿಂದ ಯಶಸ್ಸಿ ಕಾರ್ಯಚರಣೆ – vishwanews24

ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆ ; ಅರಣ್ಯ ಇಲಾಖೆಯಿಂದ ಯಶಸ್ಸಿ ಕಾರ್ಯಚರಣೆ

ಮಂಡ್ಯ : ಎರಡು ದಿನಗಳ ಹಿಂದೆ ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ.

ಶಿವವಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ಶನಿವಾರ ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಲೆಗೆ ಇಳಿದಿದೆ. ಆದರೆ ನೀರಿನ ಹರಿವಿನ ರಭಸ ಹೆಚ್ಚಾಗಿದ್ದರಿಂದ ಮತ್ತೆ ಮರಳಿ ಬರಲು ಸಾಧ್ಯವಾಗಿರಲಿಲ್ಲ.

ಭಾನುವಾರ ಆನೆ ಕಾಣದಿರುವುದನ್ನು ಗಮನಿಸಿದ ಅಧಿಕಾರಿಗಳಿಗೆ ಆನೆ ನಾಲೆಗೆ ಇಳಿದಿರುವ ವಿಷಯ ಗೊತ್ತಾಗಿದೆ. ಬಳಿಕ ಸಂಜೆವರೆಗೆ ಆನೆ ಮೇಲೆ ಬರುತ್ತದೆ ಎಂದು ಕಾದು ನೋಡಿದರೂ ಕೂಡ ಆನೆ ಮೇಲೆ ಬಂದಿಲ್ಲ. ಹೀಗಾಗಿ ಡಿಸಿಎಫ್ ರಘು ಹಾಗೂ ವನ್ಯಜೀವಿ ವಲಯ ಮೈಸೂರು ವಿಭಾಗ ಡಿಸಿಎಫ್ ಪ್ರಭು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ನಾಲೆಯ ನೀರಿನ ಪ್ರಮಾಣವನ್ನು ತಗ್ಗಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.

ಆರಂಭದಲ್ಲಿ ಅಧಿಕಾರಿಗಳು ಆನೆಗೆ ಆಹಾರ ನೀಡಿ, ಗನ್‌ನಲ್ಲಿ ಶೂಟ್ ಮಾಡುವ ಮೂಲಕ ಅರವಳಿಕೆ ಮದ್ದು ನೀಡಿದ್ದರು. ಆನೆ ಪ್ರಜ್ಞೆ ತಪ್ಪಿದ ಬಳಿಕ ಹೈಡ್ರಾಲಿಕ್‌ ಕ್ರೇನ್‌ ಮೂಲಕ ಹಗ್ಗವನ್ನು ಕಟ್ಟಿ ಕಂಟೇನರ್‌ ಮೇಲೆ ಇಟ್ಟು ಆನೆಯನ್ನು ಮೇಲಕ್ಕೆ ಎತ್ತಲಾಗಿದೆ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

10 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

11 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

11 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

12 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

12 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

12 hours ago