Featured

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣ ; ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ : ಪರಮೇಶ್ವರ್‌ – vishwanews24

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣ – ಪರಿಸ್ಥಿತಿ ನಿಯಂತ್ರಣದಲ್ಲಿದೆ : ಪರಮೇಶ್ವರ್‌

ಬೆಂಗಳೂರು : ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗರೂಕತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ನೀಡಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಘಟನೆಯ ಹಿನ್ನೆಲೆಯಲ್ಲಿ ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡಿದ್ದೇವೆ. ಹೀಗಾಗಿ ಜನರು ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಘಟನೆಗೆ ಕಾರಣ ಏನು ಎಂಬುವುದನ್ನು ವಿವರಿಸಿದ ಪರಮೇಶ್ವರ್, ‘ಹಿಂದೆ ಇದೇ ಹುಡುಗರು ಗಲಾಟೆ ಮಾಡಿಕೊಂಡಿದ್ದರು. ಮತ್ತೆ ಯಾವ ಕಾರಣಕ್ಕೆ ಘರ್ಷಣೆ ಆಯ್ತು ಅಂತಾ ಗೊತ್ತಾಗಿಲ್ಲ, ಆದ್ರೆ ಹೊಡೆದಾಡಿಕೊಂಡಿದ್ದಾರೆ. ಕೈ‌ಯಿಂದ ಎದೆಭಾಗಕ್ಕೆ ಹೊಡೆದ ಪರಿಣಾಮ ಬಾಲಕ ಸಂಕೇತ್ ಮೃತಪಟ್ಟಿದ್ದಾನೆ ಎಂದು ವಿವರಿಸಿದರು.

ಇದನ್ನೂ ಓದಿ : 👇

ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗಡೆ ಈ ಘಟನೆ ನಡೆದಿದೆ. 16 ವರ್ಷದ ಬಾಲಕ ಸಂಕೇಶ್ ಕೊಲೆಯಾಗಿದೆ. ಸಂಕೇತ್ ಹಾಗೂ ಹುಡುಗರ ಗುಂಪು ನಡುವೆ ಜಗಳ ಆಗಿತ್ತು. ಈ ಸಂದರ್ಭದಲ್ಲಿ ಎದೆಯ ಭಾಗಕ್ಕೆ ಹೊಡೆದ ಪರಿಣಾಮ ಸಂಕೇತ್ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ಬಾಲಕರ ಬಂಧನ ಆಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago