Featured

ಶಿವಮೊಗ್ಗ: ಕಾಲೇಜು ಮುಂದೆ ಅಮಲಿನಲ್ಲಿ ವಿದ್ಯಾರ್ಥಿಗಳ ತೂರಾಟ ; ವಿಡಿಯೋ ವೈರಲ್ – Vishwanews24

ಶಿವಮೊಗ್ಗ: ಕಾಲೇಜು ಮುಂದೆ ಅಮಲಿನಲ್ಲಿ ವಿದ್ಯಾರ್ಥಿಗಳ ತೂರಾಟ ; ವಿಡಿಯೋ ವೈರಲ್

ಶಿವಮೊಗ್ಗ: ಇಲ್ಲಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ. ಕಾಲೇಜು ಗೇಟ್ ಮುಂದೆಯೇ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ.ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ.

ವಿಡಿಯೋದಲ್ಲಿ ಏನಿದೆ?: ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. 57 ಸೆಕೆಂಡ್ ನ ವಿಡಿಯೋವನ್ನು ಬಸ್ ಒಂದರಲ್ಲಿ ಕುಳಿತವರು ಚಿತ್ರೀಕರಣ ಮಾಡಿದ್ದಾರೆ. ವಿದ್ಯಾರ್ಥಿಯೊಬ್ಬ ಮುಖ ಕೆಳಗೆ ಮಾಡಿ ಫುಟ್ ಪಾತ್ ಮೇಲೆ ಬಿದ್ದಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ತಲೆ ಬಗ್ಗಿಸಿ ಕುಳಿತಿರುತ್ತಾನೆ. ಅವರ ಸ್ನೇಹಿತರು ಇಬ್ಬರನ್ನು ಸಂತೈಸುತ್ತಾರೆ. ಈ ವೇಳೆ ತಲೆ ಕೆಳಗೆ ಹಾಕಿಕೊಂಡು ಕುಳಿತಿದ್ದ ವಿದ್ಯಾರ್ಥಿ ದಿಢೀರ್ ಎದ್ದು ಮುಂದಕ್ಕೆ ನಡೆಯುತ್ತಾನೆ. ಕೆಲವು ಹೆಜ್ಜೆ ಹಾಕುವಷ್ಟರಲ್ಲಿ ತೂರಾಡಿ ಕೆಳಗೆ ಬೀಳುತ್ತಾನೆ.

 ಜು.30ರಂದು ‘ಸಿಇಟಿ ಫಲಿತಾಂಶ’ ಪ್ರಕಟ –

ವೈರಲ್: ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತಾ ಓಡಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಟ್ಸಪ್ ಗ್ರೂಪ್ ಗಳಲ್ಲಿಯು ವಿಡಿಯೋ ಶೇರ್ ಆಗುತ್ತಿದೆ.

ಮಾದಕ ವಸ್ತು?: ವಿಡಿಯೋ ಚಿತ್ರೀಕರಣಗೊಂಡ ದಿನ ಮತ್ತು ಸಮಯದ ಕುರಿತು ಸ್ಪಷ್ಟತೆ ಇಲ್ಲ. ಆದರೆ ವಿದ್ಯಾರ್ಥಿಗಳು ಆಗಷ್ಟೆ ಕಾಲೇಜಿನಿಂದ ಹೊರ ಬಂದಂತೆ ತೋರುತ್ತದೆ. ಈ ವಿದ್ಯಾರ್ಥಿಗಳು ಅಮಲಿಗೆ ಮದ್ಯ ಕಾರಣವೊ ಅಥವಾ ಮಾದಕ ವಸ್ತುಗಳು ಕಾರಣವೊ ಎಂಬುದು ತಿಳಿದು ಬಂದಿಲ್ಲ.

ಕಾಲೇಜು ಕ್ಯಾಂಪಸ್ ಗಳಲ್ಲಿ ಗಾಂಜಾ, ಡ್ರಗ್ಸ್ ಪೂರೈಕೆಯಾಗುತ್ತಿರುವ ಕುರಿತು ಜಿಲ್ಲೆಯಲ್ಲಿ ಆತಂಕವಿತ್ತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮತ್ತಷ್ಟು ಮಾದಕ ವಸ್ತುಗಳು ವಿದ್ಯಾರ್ಥಿಗಳ ಕೈ ಸೇರುತ್ತಿರುವ ಕುರಿತು ಗಂಭೀರ ಚರ್ಚೆ ಆರಂಭವಾಗಿದೆ. ಕಾಲೇಜು ಅಡಳಿತ ಮಂಡಳಿ ಮತ್ತು ಪೋಷಕರು ಜಾಗೃತಿ ಮೂಡಿಸುವತ್ತ ಹೆಜ್ಜೆ ಇರಿಸಬೇಕಿದೆ. ಪೊಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವ ಅಗತ್ಯವಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಘಟನೆಯ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ್ದು, ತನಿಖೆಯಲ್ಲಿ ವಿದ್ಯಾರ್ಥಿಗಳು ಸಾಗರ ರಸ್ತೆಯಲ್ಲಿರುವ ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿಕೊಂಡು ಬಸ್ ಹತ್ತಲು ಕಾಲೇಜಿನ ಹತ್ತಿರ ಬಂದಾಗ ಕಾಲೇಜಿನ ಗೇಟ್ ನಲ್ಲಿ ತಡೆಯಲಾಗಿತ್ತು. ಬಳಿಕ ಅವರ ಪೋಷಕರಿಗೆ ಈ ವಿಚಾರವನ್ನು ತಿಳಿಸಿ, ಕಾಲೇಜು ಆಡಳಿತ ಮಂಡಳಿಯು ಪೋಷಕರೊಂದಿಗೆ ವಿದ್ಯಾರ್ಥಿಗಳಿಗೆ ಈ ವಿಷಯವಾಗಿ ಸಮಾಲೋಚನೆ ನಡೆಸಿದೆ ಎಂದಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

20 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

20 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

20 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

21 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

21 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago