ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕೋಮು ಗಲಾಟೆ ನಡೆದಿರುವ ಶಿವಮೊಗ್ಗ ನಗರದ ಹೊರವಲಯದ ಶಾಂತಿನಗರದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಪೊಲೀಸರ ಬಿಗಿ ಭದ್ರತೆ ನಡುವೆ ಬೂದಿ ಮುಚ್ಚಿದ ಕೆಂಡದಂತಿದೆ.
ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ನಿನ್ನೆ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ನೇತೃತ್ವದಲ್ಲಿ ಸೌಹಾರ್ದ ಸಭೆ ನಡೆಯಿತು. ಶಾಂತಿಗಾಗಿ ನಡೆದ ಸೌಹಾರ್ದ ಸಭೆಯಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಸರ್ವ ಧರ್ಮಗಳ ಮುಖಂಡರು ಭಾಗಿಯಾಗಿದ್ದರು.
ಈ ವೇಳೆ ನಗರದಲ್ಲಿ ಶಾಂತಿ ನೆಲೆಸಲು ಗಾಂಧಿ ಪ್ರತಿಮೆ ಮುಂದೆ ಸೌಹಾರ್ದಕ್ಕಾಗಿ ಸಂಕಲ್ಪ ಕೈಗೊಳ್ಳಲಾಯಿತು. ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ, ಮೌಲಾನಿ ಅಬ್ದುಲ್ ಲತೀಫ್ ಮುಂತಾದ ಸರ್ವ ಧರ್ಮಗಳ ಮುಖಂಡರು ಭಾಗಿಯಾಗಿದ್ದರು.
ಸೌಹಾರ್ದ ಸಭೆಯ ಬಳಿಕ ಮಾತನಾಡಿದ ವಿನಯ್ ಗುರೂಜಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸರ ಮೇಲೆ ನಿನ್ನೆ ಭಾನುವಾರ ಕಲ್ಲು ತೂರಿದ್ದಾರೆ. ಮನೆ ಮಠ ಬಿಟ್ಟು, ಹಬ್ಬ ಬಿಟ್ಟು ಕೆಲಸ ಮಾಡುತ್ತಾರೆ. ರಜೆ ಹಾಕದೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸುತ್ತಾರೆ. ಜನ ಕಾನೂನು ವಿರುದ್ಧವೇ ಹೋಗುತ್ತಾರೆ ಅಂದ್ರೆ ಯಾವ ಮಟ್ಟಿಗೆ ಅವರು ಬಂಡೆದ್ದು ಹೋಗಿದ್ದಾರೆ ನೋಡಿ. ಕಾನೂನು ಕಾಯುವವರಿಗೆ ಬೆಲೆ ಇಲ್ಲ ಅಂದರೆ ಪ್ರಜಾಪ್ರಭುತ್ವ ಎಲ್ಲಿಗೆ ಹೋಗಿ ಮುಟ್ಟಿದೆ ಎಂದು ಆತಂಕ ವ್ತಕ್ತಪಡಿಸಿದರು.
ಕಾಲೇಜು ವಿದ್ಯಾರ್ಥಿಗಳ ಮೇಲೆ ಕಣ್ಣಿಡಬೇಕು. ತಂದೆ ತಾಯಿ ಮಕ್ಕಳ ಮೇಲೆ ಕಾಳಜಿ ವಹಿಸಬೇಕು. ಪ್ರತಿ ಧರ್ಮದವರೂ ಶಿವಮೊಗ್ಗದಲ್ಲಿ ಬಾಳುತ್ತಿದ್ದಾರೆ. ನನ್ನ ಆಶ್ರಮದಲ್ಲಿ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಅಂತ ಭೇದಭಾವ ಇಲ್ಲ. ಶಾಂತಿ ಹಾಳಾಗುತ್ತಿರುವ ಮೂಲ ಎಲ್ಲಿದೆ, ಇದರ ತಾಯಿ ಬೇರನ್ನು ಹುಡುಕಬೇಕು. ಶಿವಮೊಗ್ಗದ ಗಲಾಟೆಯಲ್ಲಿ 15 ರಿಂದ 20 ವರ್ಷದ ಯುವಕರು ಭಾಗಿಯಾಗುತ್ತಾರೆ. ಇದು ಆತಂಕಕಾರಿಯಾಗಿದೆ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…