ಉಡುಪಿ: ಹಿಜಾಬ್ ವಿವಾದ ಮತ್ತು ಶಿವಮೊಗ್ಗದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ನಗರದ ಜೋಡುಕಟ್ಟೆಯಿಂದ ಹೊರಟು ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಇದರಲ್ಲಿ 90 ಮಂದಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬಂದಿ ಸೇರಿದಂತೆ ಇನ್ನೂರಕ್ಕೂ ಅಧಿಕ ಜಿಲ್ಲಾ ಪೊಲೀಸ್ ಸಿಬಂದಿಗಳು ಪಥಸಂಚಲನ ನಡೆಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ಶಿವಮೊಗ್ಗ ಗಲಭೆ ಹಿನ್ನಲೆಯಲ್ಲಿ ಜನರಲ್ಲಿ ಧೈರ್ಯ ಮೂಡಿಸಲು ಪೊಲೀಸರಿಂದ ರೂಟ್ ಮಾರ್ಚ್ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಘಟನೆಗಳೂ ನಡೆಯದಂತೆ, ಅಲ್ಲದೆ ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಪೊಲೀಸ್ ಇಲಾಖೆ ಸಿದ್ಧವಾಗಿದೆ, ಕಾನೂನು ಸುವ್ಯವಸ್ಥೆ ಗಳ ಬಗ್ಗೆ ಜನರಿಗೆ ಆತಂಕಬೇಡ ಎಂದು ಹೇಳಿದರು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ ನಾಯ್ಕ್, ರಾಘವೇಂದ್ರ, ಪಿಐ ರಾಘವೇಂದ್ರ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದರು.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…