Featured

ಶಿವಮೊಗ್ಗ: ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲದ ರೂಪಾಂತರಿ ವೈರಸ್‌ ಪತ್ತೆಯಾಗಿಲ್ಲ : .ಈಶ್ವರಪ್ಪ ಸ್ಪಷ್ಟನೆ -Vishwanews24

ಶಿವಮೊಗ್ಗ: ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲದ ರೂಪಾಂತರಿ ವೈರಸ್‌ ಪತ್ತೆಯಾಗಿಲ್ಲ : .ಈಶ್ವರಪ್ಪ ಸ್ಪಷ್ಟನೆ -Vishwanews24

ಶಿವಮೊಗ್ಗ: “ಶಿವಮೊಗ್ಗಕ್ಕೆ ದುಬೈಯಿಂದ ಬಂದ ವ್ಯಕ್ತಿಗೆ ಕೊರೊನಾ ನೆಗೆಟಿವ್‌ ವರದಿ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲದ ರೂಪಾಂತರಿ ವೈರಸ್‌ ಪತ್ತೆಯಾಗಿಲ್ಲ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಗೆ ದುಬೈಯಿಂದ ಆಗಮಿಸಿದ ವ್ಯಕ್ತಿಗೆ ಕೊರೊನಾ ನೆಗೆಟಿವ್‌‌ ವರದಿ ಬಂದಿದೆ. ಆತನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರಿಗೂ ಕೂಡಾ ಕೊರೊನಾ ನೆಗೆಟಿವ್‌ ಬಂದಿದೆ. ಅಲ್ಲದೇ, ವ್ಯಕ್ತಿಯೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದ 39 ಮಂದಿಯ ತಪಾಸಣೆ ಮಾಡಲಾಗಿದೆ. ಅವರಿಗೂ ನೆಗೆಟಿವ್‌ ಬಂದಿದೆ. ಈ ಬಗ್ಗೆ ಯಾರೂ ಕೂಡಾ ಭಯಪಡುವ ಅವಶ್ಯಕತೆ ಇಲ್ಲ” ಎಂದಿದ್ದಾರೆ.

ಕ್ರೀಡಾಭಿಮಾನಿಗಳಿಗೆ ಗುಡ್ ನ್ಯೂಸ್ : ಜುಲೈನಿಂದ ಪ್ರೊ ಕಬಡ್ಡಿ ಪ್ರಾಂಭ -Vishwanews24

“ಸರ್ಕಾರಿ ಆಸ್ಪತ್ರೆಗಳಲ್ಲಿ ಜಿಲ್ಲೆಯಲ್ಲಿ 60ವರ್ಷ ಮೇಲ್ಪಟ್ಟವರಿ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ಮೆಗ್ಗಾನ್‌‌‌ ಆಸ್ಪತ್ರೆ, ಆಯುರ್ವೇದಿಕ್ ಕಾಲೇಜು ಆಸ್ಪತ್ರೆ ಸೇರಿದಂತೆ 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ 41 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಜಿಲ್ಲೆಯ 8 ಖಾಸಗಿ ಆಸ್ಪತ್ರೆಗಳಲ್ಲಿ 250. ರೂ. ದರ ನಿಗದಿ ಮಾಡಿ ಲಸಿಕೆ ನೀಡಲಾಗುತ್ತಿದೆ. ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಿ” ಎಂದು ಕೋರಿದ್ದಾರೆ.

“ನೆರೆಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಮ್ಮ ರಾಜ್ಯದಲ್ಲಿಯೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. 1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ಪ್ರಾರಂಭ ಮಾಡಲು ಸರ್ಕಾರ ಅನುಮತಿ ನೀಡಿಲ್ಲ. ಆರನೇ ತರಗತಿಯಿಂದ ಮೇಲಿನವರಿಗೆ ಮಾತ್ರವೇ ಶಾಲೆ ನಡೆಸಲು ಸರ್ಕಾರ ಅನುಮತಿ ನೀಡಿದೆ” ಎಂದಿದ್ದಾರೆ.

ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

45 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

55 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

58 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

1 hour ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

1 hour ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago