ಶಿವಮೊಗ್ಗ : ಜಿಲ್ಲೆಯ 1.7 ಲಕ್ಷ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು – ಸಚಿವ ಕೆ.ಎಸ್.ಈಶ್ವರಪ್ಪ-Vishwanews24

ಶಿವಮೊಗ್ಗ : ಜಿಲ್ಲೆಯ 1.7 ಲಕ್ಷ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು – ಸಚಿವ ಕೆ.ಎಸ್.ಈಶ್ವರಪ್ಪ-Vishwanews24

ಶಿವಮೊಗ್ಗ : ಕೋವಿಡ್ ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೀಡಾದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ 3ಸಾವಿರ ರೂ. ನೆರವು ಒದಗಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 1,07,286 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಈಗಾಗಲೆ ಜಿಲ್ಲೆಯಲ್ಲಿ 72,065 ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಒಟ್ಟು 21.61 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಇವರ ಪೈಕಿ 11,040 ಕಾರ್ಮಿಕರಿಗೆ ಜಮಾಗೊಳಿಸಲಾದ ಮೊತ್ತ ಅವರ ಖಾತೆಗಳು ನಿಷ್ಕ್ರಿಯವಾಗಿರುವುದರಿಂದ ಹಾಗೂ ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಗೆ ಜೋಡಣೆಯಾಗದಿರುವ ಕಾರಣ 3.31 ಕೋಟಿ ರೂ. ಇನ್ನೂ ಜಮಾ ಆಗಿಲ್ಲ. ಕಾರ್ಮಿಕರು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.
ಆಹಾರ ಕಿಟ್ ವಿತರಣೆ: ಕಾರ್ಮಿಕ ಇಲಾಖೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ನೆರವಿಗೆ ಹಲವು ಸೌಲಭ್ಯ ಒದಗಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 32 ವಾರ್ಡ್‍ಗಳಲ್ಲಿರುವ 10850 ಫಲಾನುಭವಿಗಳಿಗೆ ಸೋಮವಾರದಿಂದ ಆಯಾ ವಾರ್ಡ್‍ನಲ್ಲಿ ಆಹಾರ ಕಿಟ್ ಒದಗಿಸಲಾಗುವುದು. ಫಲಾನುಭವಿಗಳು ಕಾರ್ಮಿಕ ಕಾರ್ಡ್ ಮತ್ತು ಆಧಾರ್ ಕಾರ್ಡ್ ತಂದು ಬೆಳಿಗ್ಗೆ ವಿತರಣಾ ಕೇಂದ್ರದಲ್ಲಿ ಟೋಕನ್ ಪಡೆಯಬೇಕು. ಮರುದಿನ ಆಹಾರ ಕಿಟ್ ವಿತರಣೆ ಮಾಡಲಾಗುವುದು. ಆಹಾರ ಕಿಟ್ ಕಾರ್ಮಿಕರಿಗೆ ವಿತರಿಸಲು ಅನುಕೂಲವಾಗುವಂತೆ 9 ತಂಡಗಳನ್ನು ರಚಿಸಲಾಗಿದ್ದು, 32 ಕೇಂದ್ರಗಳಲ್ಲಿ ನೋಡಲ್ ಅಧಿಕಾರಿಗಳ ತಂಡದ ನೇತೃತ್ವದಲ್ಲಿ ವಿತರಣೆ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.
Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago