ಬೆಂಗಳೂರು, : ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಸ್ಪೋಟದಿಂದ ಸಾವನ್ನಪ್ಪಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಶಿವಮೊಗ್ಗದಲ್ಲಿ ನಡೆದ ಘಟನೆಯಲ್ಲಿ ಜೀವಗಳು ಸಾವಿಗೀಡಾಗಿರುವುದು ದುಃಖ ತಂದಿದೆ. ಅವರ ಕುಟುಂಬಗಳಿಗೆ ಸಂತಾಪ ತಿಳಿಸುವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತದೆ” ಎಂದು ತಿಳಿಸಿದ್ದಾರೆ.
ಶಿವಮೊಗ್ಗ: ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟ : 10 ಕಾರ್ಮಿಕರ ಸಾವು
ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್ ಬಾಕ್ಸ್‌ಗಳು ಸ್ಫೋಟಗೊಂಡಿದ್ದು ಕಾರ್ಮಿಕರ ದೇಹಗಳು ಸಂಪೂರ್ಣವಾಗಿ ಛಿದ್ರವಾಗಿವೆ.
ಭೂಕಂಪನದ ಸಂದರ್ಭದಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಭೂಮಿ ಕಂಪಿಸಿದ ವೇಳೆ ಸ್ಪೋಟವಾಗಿರುವ ಸಾಧ್ಯತೆಯಿದೆ ಎಂದು ಕೂಡಾ ಹೇಳಲಾಗಿದೆ. ಆದರೆ ಇನ್ನು ಕೆಲವರು ಸ್ಫೋಟದಿಂದಲೇ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…