ಶಿವಮೊಗ್ಗ: ತರಬೇತಿ ವೇಳೆ ಪ್ಯಾರಾಚೂಟ್ ತೆರೆದುಕೊಳ್ಳದ ಪರಿಣಾಮ ವಾಯು ಪಡೆಯ ವಾರೆಂಟ್ ಅಧಿಕಾರಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಕೂರು ಗ್ರಾಮದ ಮಂಜುನಾಥ್ ಜಿ.ಎಸ್(36) ಮೃತ ವಾಯು ಪಡೆಯ ಅಧಿಕಾರಿ ಎಂದು ಗುರುತಿಸಲಾಗಿದೆ.
ಆಗ್ರಾದಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಮಾಲ್ಪುರ ಪ್ಯಾರಾಚೂಟ್ ಡ್ರಾಪ್ ಝೋನ್‌ನಲ್ಲಿ ತರಬೇತಿ ನಡೆಯುತ್ತಿತ್ತು. ವಾಯುಸೇನೆಯ 12 ಅಧಿಕಾರಿಗಳು ಪ್ಯಾರಾಚೂಟ್ ತರಬೇತಿಗೆ ವಿಮಾನದಿಂದ ಜಿಗಿದಿದ್ದರು. 11 ಮಂದಿ ಮಾತ್ರ ಪ್ಯಾರಾಚೂಟ್ ಬಳಸಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದರು. ಆದರೆ ವಾರೆಂಟ್ ಆಫೀಸರ್ ಮಂಜುನಾಥ್ ಜಿ.ಎಸ್ ನಾಪತ್ತೆಯಾಗಿದ್ದರು ಎನ್ನಲಾಗಿದೆ.
ಮಂಜುನಾಥ್ ಅವರಿಗಾಗಿ ಶೋಧ ಕಾರ್ಯ ನಡೆಸಿದಾಗ ಸಮೀಪದ ಜಮೀನಿನಲ್ಲಿ ಪತ್ತೆಯಾಗಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಪರೀಕ್ಷಿಸಿದ ವೈದ್ಯರು ಮಂಜುನಾಥ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ವಿಮಾನದಿಂದ ಹಾರಿದ ನಂತರ ಪ್ಯಾರಾಚೂಟ್ ತೆರೆದುಕೊಳ್ಳದೆ ಮಂಜುನಾಥ್ ಅವರು ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಮಂಜುನಾಥ್ ಅವರು ಮೂಲತಃ ಹೊಸನಗರ ತಾಲೂಕು ಸಂಕೂರು ಗ್ರಾಮದ ಕೃಷಿಕ ಕುಟುಂಬದವರಾಗಿದ್ದು, ತಂದೆ ಸುರೇಶ್, ತಾಯಿ ನಾಗರತ್ನ ಇಬ್ಬರು ಸಹೋದರಿಯರು, ಓರ್ವ ಸಹೋದರ ಇದ್ದಾರೆ.
ತಮ್ಮೂರಿನ ಸಮೀಪದ ಶಾಲೆಯಲ್ಲಿ ಪ್ರೌಢಶಾಲೆ ಓದಿದ್ದ ಮಂಜುನಾಥ್ ಅವರು ಸಾಗರದಲ್ಲಿ ಪಿಯುಸಿ ಪೂರ್ಣಗೊಳಿಸಿದ್ದರು. ಭಾರತೀಯ ವಾಯು ಸೇನೆಗೆ ಸೇರಿದ್ದ ಇವರು ವೈ ಗ್ರೇಡ್ ಅಧಿಕಾರಿಯಾಗಿದ್ದ ವಾರಂಟ್ ಅಫೀಸರ್ ಆಗಿ ಅಸ್ಸಾಂನಲ್ಲಿ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಸ್ಸಾಂ ಮೂಲದ ಯುವತಿಯನ್ನು ಮದುವೆಯಾಗಿದ್ದು, ಒಂದು ಮಗು ಇದೆ.
ಘಟನೆ ಕುರಿತು ಶುಕ್ರವಾರ ಮಧ್ಯಾಹ್ನ ಮಂಜುನಾಥ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಶನಿವಾರ ರಾತ್ರಿ ಮಂಜುನಾಥ್ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮಿಸಲಿದೆ. ಮಧ್ಯರಾತ್ರಿ ಹೊತ್ತಿಗೆ ಹೊಸನಗರಕ್ಕೆ ಪಾರ್ಥೀವ ಶರೀರ ರವಾನೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…