ಶಿವಮೊಗ್ಗ- ತಿರುಪತಿ ಚೆನ್ನೈ  ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ – Vishwanews24

Featured, ರಾಜ್ಯ ನ್ಯೂಸ್

ಶಿವಮೊಗ್ಗ- ತಿರುಪತಿ ಚೆನ್ನೈ  ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ

ಶಿವಮೊಗ್ಗ : ತಿರುಪತಿ ಚೆನ್ನೈ ಎಕ್ಸ್‌ಪ್ರೆಸ್ ರೈಲಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಸಂಸದ ಬಿವೈ ರಾಘವೇಂದ್ರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ.

ಶಿವಮೊಗ್ಗದಿಂದ ವಾರದಲ್ಲಿ ಎರಡು ಬಾರಿ ತಿರುಪತಿ, ಚೆನ್ನೈಗೆ ತೆರಳಲಿದೆ‌. ಇದರಿಂದ ತಿರುಪತಿಗೆ ನೇರವಾಗಿ ತೆರಳಲು ಈ ರೈಲು ಅನುಕೂಲವಾಗಲಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಶಿವಮೊಗ್ಗ ದೇಶದಲ್ಲೇ ವೇಗವಾಗಿ ಬೆಳೆಯುತ್ತಿರುವ ನಗರ, ಹಾಗಾಗಿ ಈ ರೈಲು ಸೇವೆ ಆರಂಭಿಸಿರುವುದರಿಂದ ಶಿವಮೊಗ್ಗ ಮಾತ್ರವಲ್ಲದೇ ಸುತ್ತಮುತ್ತಲಿನ ಜಿಲ್ಲೆಗಳ ಸಾವಿರಾರು ಜನರಿಗೆ ಅನುಕೂಲವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು. ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ, ಸೂಡಾ ಅಧ್ಯಕ್ಷ ನಾಗರಾಜ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇನ್ಮುಂದೆ ಗ್ರಾಮ ಪಂಚಾಯಿತಿಯಲ್ಲೇ ವಿವಾಹ ನೋಂದಣಿ : ರಾಜ್ಯ ಸರ್ಕಾರ ಆದೇಶ – Vishwanews24

Leave a Reply