Featured

ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕ ಹಾಗೂ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ದಾಳಿ  – Vishwanews24

ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕ ಹಾಗೂ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ದಾಳಿ

ಶಿವಮೊಗ್ಗ: ಹರ್ಷ ಹತ್ಯೆಯ ಮಾಸುವೇ ಮುನ್ನವೇ ಸೋಮವಾರ ತಡರಾತ್ರಿ ಶಿವಮೊಗ್ಗದಲ್ಲಿ ಬಜರಂಗದಳ ಸಹ ಸಂಚಾಲಕ ಹಾಗೂ ಬಿಜೆಪಿ ಮುಖಂಡ ಕಾಂತರಾಜು ಎಂಬಾತನ ಮೇಲೆ ಮಾರಣಾಂತಿಕ ದಾಳಿ ನಡೆಸಲಾಗಿದೆ. ಅದೃಷ್ಟವಶಾತ್ ದುಷ್ಕರ್ಮಿಗಳ ಕೈಯಲ್ಲಿದ್ದ ಮಚ್ಚು ಕಸಿದುಕೊಂಡ ಕಾಂತರಾಜ್, ದುಷ್ಕರ್ಮಿಗಳಿಂದ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.

ರಾಜೀವ್ ಗಾಂಧಿ ಬಡಾವಣೆಯಲ್ಲಿ ಈ ದಾಳಿ ನಡೆದಿದ್ದು, ರಾತ್ರಿ 10.20ರ ಸುಮಾರಿಗೆ ಮೂತ್ರ ವಿಸರ್ಜನೆಗೆಂದು ಮನೆಯಿಂದ ಹೊರಬಂದ ಕಾಂತರಾಜ್ (27) ಮೇಲೆ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕಾಂತರಾಜುವಿನ ಬಲಗೈ ಗೆ ಮಚ್ಚಿನಿಂದ ಏಟು ಬಿದ್ದಿದೆ. ಇದಲ್ಲದೆ ದೇಹದ ಹಲವೆಡೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ಎಸ್‌ಪಿ ಲಕ್ಷ್ಮೀಪ್ರಸಾದ್ ಮಾತನಾಡಿ, ಈಗಾಗಲೇ ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದ್ದು ಅವರ ವಿಚಾರಣೆ ನಡೆಸಲಾಗುತ್ತಿದೆ .ಬಜರಂಗದಳ ಸಂಘಟನೆ ಚಟುವಟಿಕೆಯಲ್ಲಿ ಇದ್ದಿದ್ದರಿಂದ ಈ ಹಲ್ಲೆಯಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದ್ದು ವಿಚಾರಣೆ ಬಳಿಕ ಮಾಹಿತಿ ಲಭಿಸಲಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

15 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

16 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

16 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

16 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

16 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago