ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

Featured, ರಾಜ್ಯ ನ್ಯೂಸ್

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ 

ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟು ಹೋದ ಘಟನೆ ಹೊಸನಗರ ತಾಲೂಕಿನ ಗವಟೂರು ಹೊಳೆ ಬಳಿ ನಡೆದಿದೆ. ​

ಸುಮಾರು 10 ರಿಂದ 15 ದಿನಗಳ ಹೆಣ್ಣು ಮಗುವನ್ನು ಕೈ ಚೀಲವೊಂದರಲ್ಲಿ ಬಿಳಿ ಬಟ್ಟೆಯಲ್ಲಿ ಸುತ್ತಿ ಬಸ್ ನಿಲ್ದಾಣದಲ್ಲಿ ನೇತು ಹಾಕಿ ಹೋಗಿದ್ದಾರೆ. ಗವಟೂರು ಗ್ರಾಮದ ರಸ್ತೆ ಪಕ್ಕದ ಸಣ್ಣದೂಂದು ಬಸ್ ನಿಲ್ದಾಣದಲ್ಲಿ ಯಾರು ಇಲ್ಲದ ವೇಳೆ ಚೀಲವನ್ನು ಬಿಟ್ಟು ಪರಾರಿಯಾಗಿದ್ದಾರೆ‌.

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ನಿನ್ನೆ ರಾತ್ರಿ ಸುಮಾರು 9 ಗಂಟೆಯ ಸಮಯದಲ್ಲಿ ಬಸ್ ನಿಲ್ದಾಣದ ಹಿಂಭಾಗದ ನಿವಾಸಿಯೊಬ್ಬರಿಗೆ ಮಗುವಿನ ಅಳುವ ಶಬ್ದ ಕೇಳಿಸಿದ್ದು, ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅವರು ರಿಪ್ಪನ್​ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತಯೇ ಸ್ಥಳಕ್ಕೆ ಧಾವಿಸಿದ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ, ಮಗುವನ್ನು ನೋಡಿದ್ದಾರೆ‌. ನಂತರ ಮಗುವನ್ನು ರಿಪ್ಪನ್​ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಮಗುವಿನ ಆರೋಗ್ಯ ಪರೀಕ್ಷಿಸಿದ್ದು, ಮಗು 1.6 ಕೆ.ಜಿ ತೂಕವಿದ್ದು, ಆರೋಗ್ಯವಾಗಿದೆ. ಮಗುವಿನ ರಕ್ಷಣೆಗಾಗಿ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸದ್ಯ ಮಗು ಶಿಶು ಆರೈಕೆ ಕೇಂದ್ರದಲ್ಲಿದೆ.

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ನಮಗೆ ಮಾಹಿತಿ ಬರುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಚೀಲದಲ್ಲಿ ಮಗು ಇರುವುದು ತಿಳಿದು ಬಂದಿತು. ಸದ್ಯ ಮಗು ಆರೋಗ್ಯವಾಗಿದೆ‌. ಮಗುವಿನ ಪೋಷಕರ ಪತ್ತೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ರಿಪ್ಪನ್​ಪೇಟೆ ಪೊಲೀಸ್ ಠಾಣೆಯ ಪಿಎಸ್​ಐ ರಾಜುರೆಡ್ಡಿ ಅವರು ತಿಳಿಸಿದ್ದಾರೆ.

Leave a Reply