ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟು ಹೋದ ಘಟನೆ ಹೊಸನಗರ ತಾಲೂಕಿನ ಗವಟೂರು ಹೊಳೆ ಬಳಿ ನಡೆದಿದೆ.
ಸುಮಾರು 10 ರಿಂದ 15 ದಿನಗಳ ಹೆಣ್ಣು ಮಗುವನ್ನು ಕೈ ಚೀಲವೊಂದರಲ್ಲಿ ಬಿಳಿ ಬಟ್ಟೆಯಲ್ಲಿ ಸುತ್ತಿ ಬಸ್ ನಿಲ್ದಾಣದಲ್ಲಿ ನೇತು ಹಾಕಿ ಹೋಗಿದ್ದಾರೆ. ಗವಟೂರು ಗ್ರಾಮದ ರಸ್ತೆ ಪಕ್ಕದ ಸಣ್ಣದೂಂದು ಬಸ್ ನಿಲ್ದಾಣದಲ್ಲಿ ಯಾರು ಇಲ್ಲದ ವೇಳೆ ಚೀಲವನ್ನು ಬಿಟ್ಟು ಪರಾರಿಯಾಗಿದ್ದಾರೆ.
ನಿನ್ನೆ ರಾತ್ರಿ ಸುಮಾರು 9 ಗಂಟೆಯ ಸಮಯದಲ್ಲಿ ಬಸ್ ನಿಲ್ದಾಣದ ಹಿಂಭಾಗದ ನಿವಾಸಿಯೊಬ್ಬರಿಗೆ ಮಗುವಿನ ಅಳುವ ಶಬ್ದ ಕೇಳಿಸಿದ್ದು, ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅವರು ರಿಪ್ಪನ್‌ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತಯೇ ಸ್ಥಳಕ್ಕೆ ಧಾವಿಸಿದ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ, ಮಗುವನ್ನು ನೋಡಿದ್ದಾರೆ. ನಂತರ ಮಗುವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಮಗುವಿನ ಆರೋಗ್ಯ ಪರೀಕ್ಷಿಸಿದ್ದು, ಮಗು 1.6 ಕೆ.ಜಿ ತೂಕವಿದ್ದು, ಆರೋಗ್ಯವಾಗಿದೆ. ಮಗುವಿನ ರಕ್ಷಣೆಗಾಗಿ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸದ್ಯ ಮಗು ಶಿಶು ಆರೈಕೆ ಕೇಂದ್ರದಲ್ಲಿದೆ.
ನಮಗೆ ಮಾಹಿತಿ ಬರುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಚೀಲದಲ್ಲಿ ಮಗು ಇರುವುದು ತಿಳಿದು ಬಂದಿತು. ಸದ್ಯ ಮಗು ಆರೋಗ್ಯವಾಗಿದೆ. ಮಗುವಿನ ಪೋಷಕರ ಪತ್ತೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರು ತಿಳಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]