ಶಿವಮೊಗ್ಗ: ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಸಂಭವಿಸಿ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ರವಿವಾರ ರಾತ್ರಿ ಸಂಭವಿಸಿದೆ.
ಹಲುಗಿನಕೊಪ್ಪದ ಜ್ಯೋತಿ (30 ವ), ಗಂಗಮ್ಮ (50 ವ) ಮತ್ತು ಸೌಜನ್ಯ (4 ವ) ಮೃತರು. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.
ಮಲ್ಲಿಕಾರ್ಜನ, ಮಗಳು ಸೌಜನ್ಯ, ತಾಯಿ ಜ್ಯೋತಿ, ಅವರ ತಾಯಿ ಗಂಗಮ್ಮ ಬೈಕಿನಲ್ಲಿ ತೆರಳುತ್ತಿದ್ದರು. ಇವರು ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ಹೋಗುತ್ತಿದ್ದರು. ಕಾರು ಹಿರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿತ್ತು.
ಶತ್ರುಗಳ ಕಾಟದಿಂದ ಮುಕ್ತಿ.. ನೋಡಿ ಇಂದಿನ ದಿನ ಭವಿಷ್ಯ..Vishwanews24
ಮಂಚಿಕೊಪ್ಪ ಬಳಿ ಕಾರು, ಬೈಕು ಮುಖಾಮುಖಿ ಢಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಗಂಗಮ್ಮ ನಿಧನರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಜ್ಯೋತಿ ಅಸುನೀಗಿದ್ದಾರೆ. ಮಲ್ಲಿಕಾರ್ಜುನ ಅವರ ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ಬೈಕು ನುಜ್ಜುಗುಜ್ಜಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…