Featured

ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ : ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ – Vishwanews24

ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ : ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ – Vishwanews24

ಬೆಂಗಳೂರು: ಶಿವಮೊಗ್ಗದಲ್ಲಿ ಕಳೆದ ರಾತ್ರಿ ಹರ್ಷ ಎಂಬ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ.

ಈ ಕುರಿತು ಶಿವಮೊಗ್ಗಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳು ಈ ಕೊಲೆ ಮಾಡಿದ್ದಾರೆ, ಈವರೆಗೆ ಮುಸ್ಲಿಮರು ಬಾಲ ಬಿಚ್ಚಿರಲಿಲ್ಲ. ಇತ್ತೀಚೆಗೆ ರಾಷ್ಟ್ರಧ್ವಜ ಇಳಿಸಿ ಭಗವಾಧ್ವಜ ಹಾರಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರಿಂದಲೇ ಮುಸ್ಲಿಮರಿಗೆ ಕುಮ್ಮಕ್ಕು ಸಿಕ್ಕಿದೆ ಎಂದು ಕೂಡ ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡುತ್ತದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಘಟನೆ ಬಗ್ಗೆ ಸಿಎಂ ಮತ್ತು ಗೃಹ ಸಚಿವರ ಜೊತೆ ಮಾತನಾಡುತ್ತೇನೆ. ಡಿ ಕೆ ಶಿವಕುಮಾರ್ ಅವರು, ಸೂರತ್‌ನಿಂದ ಕೇಸರಿ ಶಾಲು ತರಿಸಿದ್ದಾಗಿ ಹೇಳಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಆ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಂ ಗೂಂಡಾಗಳು ನಿನ್ನೆ ರಾತ್ರಿ ನಮ್ಮ ಪ್ರಾಮಾಣಿಕ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ. ಯುವಕನ ಕಾರ್ಯವನ್ನು ನಾವೇ ಮುಂದೆ ನಿಂತು ಮಾಡುತ್ತೇವೆ ಎಂದರು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

3 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

5 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

6 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

6 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

6 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

6 hours ago