ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಕಗ್ಗೊಲೆಯಾಗಿರುವ ಘಟನೆಯನ್ನು ಖಂಡಿಸುತ್ತೇನೆ, ಆಡಳಿತ ಪಕ್ಷದ ಹಿರಿಯ ನಾಯಕರು ಇರುವಂತಹ ಜಿಲ್ಲೆಯಲ್ಲಿ ರಾತ್ರೋರಾತ್ರಿ ಈ ಘಟನೆ ನಡೆದಿರುವುದನ್ನು ನೋಡಿದರೆ ಕಿಡಿಗೇಳಿಗಳಿಗೆ ಸರ್ಕಾರದ ಕಾನೂನಿನಲ್ಲಿ, ನಾಯಕರ ಮೇಲೆ ಭಯವಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ ಎಂದು ವಿಧಾನ ಸೌಧದಲ್ಲಿ ವಿರೋಧ ಪಕ್ಷದ ಉಪ ನಾಯಕ ಯು ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ. ಯಾರದ್ದೋ ತಪ್ಪಿಗೆ ಮುಗ್ಧರಿಗೆ ಅನ್ಯಾಯವಾಗಬಾರದು. ಕೂಡಲೇ ಕೊಲೆ ಆರೋಪಿಗಳನ್ನು ಬಂಧನ ಮಾಡಬೇಕು, ಕೊಲೆಗಾರರನ್ನು ತಕ್ಷಣ ಪತ್ತೆಹಚ್ಚಿ ಶಿಕ್ಷೆಯಾಗುವ ಕೆಲಸವನ್ನು ಸರ್ಕಾರ ಕೂಡಲೇ ಮಾಡಬೇಕು ಎಂದು ಒತ್ತಾಯಿಸಿದರು.
ಕೊಲೆ ಪ್ರಕರಣದಲ್ಲಿ ಯಾರಿದ್ದಾರೋ ಕೂಡಲೇ ಬಂಧಿಸಲಿ. ಈ ಪ್ರಕರಣಕ್ಕೆ ಬೇರೆ-ಬೇರೆ ತಿರುವು ನೀಡುವುದು ಬೇಡ, ಸರ್ಕಾರ ಬಿಗಿ ಕ್ರಮ ಕೈಗೊಳ್ಳದೇ ಇದ್ದರೆ ಕಷ್ಟ. ಕೊಲೆಗಡುಕರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…