ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : 12 ಮಂದಿ ಪೊಲೀಸ್ ವಶಕ್ಕೆ – Vishwanews24
ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : 12 ಮಂದಿ ಪೊಲೀಸ್ ವಶಕ್ಕೆ – Vishwanews24
ಶಿವಮೊಗ್ಗ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಒಟ್ಟು 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಸೋಮವಾರ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಒಟ್ಟು 12 ಜನ ಆರೋಪಿಗಳ ಪೈಕಿ ಬೆಂಗಳೂರಿನಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹರ್ಷನ ಹತ್ಯೆಯಲ್ಲಿ ಭಾಗಿಯಾಗಿದ್ದ ಎಲ್ಲ 12 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಸೋಮವಾರ ಶಿವಮೊಗ್ಗದ ಜೆ.ಪಿ. ನಗರ ನಿವಾಸಿ ಸೈಯದ್ ನದೀಮ್(20) ಮತ್ತು ಶಿವಮೊಗ್ಗದ ಬುದ್ಧಾನಗರ ನಿವಾಸಿ ಕಾಸಿಫ್ (30) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ರೈಲು ಮೂಲಕ ಪರಾರಿಯಾಗಿದ್ದ ಇತರೆ ಮೂವರು ಆರೋಪಿಗಳನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ :
ಉಡುಪಿ : ಮಲ್ಪೆಯ ವೈರಲ್ ವಾಸಣ್ಣನ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು – Vishwanews24
