Featured

ಶಿವಮೊಗ್ಗ: ಮುಂದುವರಿದ ಹಿಜಬ್ ವಿವಾದ : ನಮಗೆ ಪರೀಕ್ಷೆ ಮುಖ್ಯವಲ್ಲ, ಧರ್ಮ ಮುಖ್ಯ ; ವಿದ್ಯಾರ್ಥಿನಿಯರ ಪರೀಕ್ಷೆ ಬಹಿಷ್ಕಾರಕ್ಕೆ ಪೋಷಕರ ಬೆಂಬಲ – Vishwanews24

ಶಿವಮೊಗ್ಗ: ಮುಂದುವರಿದ ಹಿಜಬ್ ವಿವಾದ : ನಮಗೆ ಪರೀಕ್ಷೆ ಮುಖ್ಯವಲ್ಲ, ಧರ್ಮ ಮುಖ್ಯ ; ವಿದ್ಯಾರ್ಥಿನಿಯರ ಪರೀಕ್ಷೆ ಬಹಿಷ್ಕಾರಕ್ಕೆ ಪೋಷಕರ ಬೆಂಬಲ – Vishwanews24

ಶಿವಮೊಗ್ಗ: ಜಿಲ್ಲೆಯಲ್ಲಿ ಹಿಜಬ್ ವಿವಾದ ಇಂದು ಸಹ ಮುಂದುವರಿದಿದ್ದು, ಇಬ್ಬರು ವಿದ್ಯಾರ್ಥಿನಿಯರು ತರಗತಿಯನ್ನು ಬಹಿಷ್ಕರಿಸಿದ್ದಾರೆ.

ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಸಹ 10 ನೇ ತರಗತಿಗೆ ತಾಲೂಕು ಮಟ್ಟದ ಪೂರ್ವಭಾವಿ ಸಿದ್ಧತಾ ಪರೀಕ್ಷೆ ಇತ್ತು. ವಿಜ್ಞಾನ ಪರೀಕ್ಷೆ ನಡೆಯುತ್ತಿದೆ. ಹಿಜಬ್, ಬುರ್ಖಾ ಧರಿಸಿ 9 ಹಾಗೂ 10ನೇ ತರಗತಿ ವಿದ್ಯಾರ್ಥಿನಿ ಬಂದಿದ್ದರು. ಆದರೆ ಹಿಜಬ್, ಬುರ್ಖಾ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಶಿಕ್ಷಕರ ನಿರಾಕರಣೆ ಮಾಡಿದರು. ಇದರಿಂದಾಗಿ ವಿದ್ಯಾರ್ಥಿನಿಯರು ಶಾಲೆಯಿಂದ ಹೊರಗೆ ಹೋಗಿದ್ದಾರೆ.

ನಿನ್ನೆ ಸಹ 10ನೇ ತರಗತಿಗೆ ತಾಲೂಕು ಮಟ್ಟದ ಪೂರ್ವಭಾವಿ ಸಿದ್ಧತಾ ಪರೀಕ್ಷೆ ಸಹ ಇತ್ತು. ತರಗತಿಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಹಿಜಬ್, ಬುರ್ಖಾ ತೆಗೆಯುವಂತೆ ಸೂಚಿಸಿದ್ದರು. ಕೆಲ ವಿದ್ಯಾರ್ಥಿನಿಯರು ಬುರ್ಖಾ, ಹಿಜಬ್ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಪರೀಕ್ಷೆ ಆರಂಭಕ್ಕೂ ಮೊದಲು ಕೆಲವು ವಿದ್ಯಾರ್ಥಿನಿಯರು ನಾವು ಹಿಜಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ. ಇಲ್ಲದಿದ್ದರೆ ಪರೀಕ್ಷೆ ಬರೆಯುವುದಿಲ್ಲ ಎಂದು ತಗಾದೆ ತೆಗೆದಿದ್ದಾರೆ.

ಇದಕ್ಕೆ ಒಪ್ಪದ ಶಿಕ್ಷಕರು ಎಲ್ಲರೂ ಕರ್ನಾಟಕ ಹೈಕೋರ್ಟ್ ಆದೇಶ ಪಾಲನೆ ಮಾಡಬೇಕು. ಹಿಜಬ್ ತೆಗೆದರೆ ತರಗತಿಯಲ್ಲಿ ಇರಿ, ಇಲ್ಲದಿದ್ದರೆ ಹೊರಗೆ ಹೋಗಿ ಎಂದಿದ್ದಾರೆ. ವಿದ್ಯಾರ್ಥಿನಿಯರು ಮರು ಮಾತನಾಡದೇ ನಾವು ಬೇಕಾದರೆ ಪರೀಕ್ಷೆ ಬಹಿಷ್ಕರಿಸುತ್ತೇವೆ. ಹಿಜಬ್ ತೆಗೆಯುವುದಿಲ್ಲ. ನಮಗೆ ಪರೀಕ್ಷೆ ಮುಖ್ಯವಲ್ಲ, ಧರ್ಮ ಮುಖ್ಯ ಎಂದು ಶಾಲೆಯಿಂದ ಮನೆಗೆ ತೆರಳಿದ್ದಾರೆ. ವಿದ್ಯಾರ್ಥಿನಿಯರ ಪರೀಕ್ಷೆ ಬಹಿಷ್ಕಾರಕ್ಕೆ ಪೋಷಕರು ಸಹ ಬೆಂಬಲ ವ್ಯಕ್ತಪಡಿಸಿದ್ದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

2 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

2 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

2 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

4 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

4 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

24 hours ago