Featured

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ

ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು ಆನೆಗಳ ನಡುವಿನ ಕಾದಾಟದ ಸಂದರ್ಭದಲ್ಲಿ ಪ್ರವಾಸಿ ಮಹಿಳೆಯೊಬ್ಬರು ಸಿಕ್ಕಿಹಾಕಿಕೊಂಡು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಪ್ರವಾಸಿಗ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆ (ಮೇ 22)ಯಿಂದ ತಾತ್ಕಾಲಿಕವಾಗಿ ಪ್ರವೇಶವನ್ನು ನಿಷೇಧಿಸಲು ಅರಣ್ಯ ಇಲಾಖೆ ಮುಂದಾಗಿದೆ.

ಕೆಲ ದಿನಗಳ ಹಿಂದೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಆನೆಗಳ ನಡುವಿನ ಗುದ್ದಾಟದ ಸಂದರ್ಭದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಜುನೆಸ್ಸಿ(33) ಎಂಬವವರು ಮೃತಪಟ್ಟಿದ್ದರು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ಆನೆ ಬಿಡಾರಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾಗಿರುವ ಸಕ್ರೆಬೈಲು ಆನೆ ಬಿಡಾರಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಯಿಂದ ಆನೆಗಳನ್ನು ನೋಡಲು ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ಬಂದಂತಹ ಪ್ರವಾಸಿಗರು ಆನೆಗಳಿಗೆ ಸ್ನಾನ ಮಾಡಿಸುವುದು ಮತ್ತು ಅವುಗಳನ್ನು ಮುಟ್ಟುವುದು ಮಾಡುತ್ತಾರೆ. ದುಬಾರೆ ಆನೆ ಬಿಡಾರದ ದುರಂತದ ನಂತರ ಆನೆಗಳಿಗೆ ಸ್ನಾನ ಮಾಡಿಸುವ ವ್ಯವಸ್ಥೆ ಬಂದ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದುಬಾರೆಯಲ್ಲಿ ನಡೆದ ಘಟನೆ ಸಕ್ರೆಬೈಲು ಆನೆ ಬಿಡಾರದಲ್ಲಿ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಮಹತ್ವದ ನಿರ್ಧಾರವನ್ನು ಅರಣ್ಯ ಇಲಾಖೆ ಕೈಗೊಂಡಿದೆ.

ಸಕ್ರೆಬೈಲು ಆನೆ ಬಿಡಾರವು ಇಂದಿನಿಂದಲೇ ಮುಚ್ಚಬೇಕಿತ್ತು. ಆದರೆ ಇಂದು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದರಿಂದ ಅವರಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ನಾಳೆಯಿಂದ ಕೆಲ ದಿನಗಳ ಕಾಲ ತಾತ್ಕಾಲಿಕವಾಗಿ ಬಂದ್ ಆಗಿರಲಿದೆ.

ಸದ್ಯ ಸಕ್ರೆಬೈಲು ಆನೆ ಬಿಡಾರದಲ್ಲಿ 24 ಆನೆಗಳು ಇವೆ. 19 ಗಂಡು ಆನೆಗಳು ಐದು ಹೆಣ್ಣು ಆನೆಗಳು ಇವೆ. ಆನೆಗಳಿಗೆ ಸ್ನಾನ ಮಾಡಿಸುವ ಜಾಗದಿಂದ 50 ಮೀಟರ್ ದೂರದಲ್ಲಿ ಆನೆಗಳನ್ನು ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

9 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

9 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

10 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

11 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

14 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

14 hours ago