Featured

ಶಿವಮೊಗ್ಗ : ರಾತ್ರಿ ಅನಗತ್ಯ ಬೈಕ್ ಸಂಚಾರ ನಿಷೇಧ , ಬೈಕ್ ನಲ್ಲಿ ಇಬ್ಬರು ಸಂಚರಿಸುವಂತಿಲ್ಲ ; ಎಡಿಜಿಪಿ ಅಲೋಕ್ ಕುಮಾರ್ ಆದೇಶ  – Vishwanews24

ಶಿವಮೊಗ್ಗ : ರಾತ್ರಿ ಅನಗತ್ಯ ಬೈಕ್ ಸಂಚಾರ ನಿಷೇಧ , ಬೈಕ್ ನಲ್ಲಿ ಇಬ್ಬರು

ಸಂಚರಿಸುವಂತಿಲ್ಲ ; ಎಡಿಜಿಪಿ ಅಲೋಕ್ ಕುಮಾರ್ ಆದೇಶ

ಶಿವಮೊಗ್ಗ: ವೀರ ಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಚೂರಿ ಇರಿತ ಘಟನೆಗಳು ನಡೆದು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇದಾಜ್ಞೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಹೊತ್ತು ಅನಗತ್ಯ ಬೈಕ್ ಸಂಚಾರ ನಿಷೇಧಿಸಿ, ಬೈಕ್ ನಲ್ಲಿ ಇಬ್ಬರು ಯುವಕರು ಸಂಚರಿಸದಂತೆ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ದ್ವಿ ಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನವರನ್ನು ಕೂರಿಸಿಕೊಂಡು ಹೋಗುವುದನ್ನು ನಿಷೇದಿಸಲಾಗಿದೆ. (40 ವರ್ಷ ಮೇಲ್ಪಟ್ಟ ವಯಸ್ಕರು ಮತ್ತು ಮಹಿಳೆಯರನ್ನು ಹೊರತು ಪಡಿಸಿ) ಅಲ್ಲದೆ ರಾತ್ರಿ 9:00 ರಿಂದ ಬೆಳಗಿನ ಜಾವ 05:00 ರವೆಗೆ ತುರ್ತು ಸಂದರ್ಭವನ್ನು ಹೊರತು ಪಡಿಸಿ ದ್ವಿ ಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶಿದ್ದಾರೆ.

ಇನ್ನು ಬೇರೆ ಬೇರೆ ಜಿಲ್ಲೆಗಳಿಂದ ಪೊಲೀಸ್ ಅಧಿಕಾರಿಗಳು ಬಂದಿದ್ದು, ತುಂಗಾನಗರ, ದೊಡ್ಡಪೇಟೆ, ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೆಟ್ರೋಲಿಂಗ್ ಮಾಡಿದ್ದೇವೆ ಎಂದರು

ಶಿವಮೊಗ್ಗದಲ್ಲಿ ಈಗಾಗಲೇ 5 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಬಂಧಿಸಲಾಗಿದ್ದು, ಯಾವುದೇ ಮೆರವಣಿಗೆ, ಸಭೆ, ಸಮಾರಂಭ ಮತ್ತು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇದಿಸಲಾಗಿದೆ.

🚫 ಉಡುಪಿ: ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ ; ಜಿಲ್ಲೆಯಾದ್ಯಂತ ಹೈಅಲರ್ಟ್ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

6 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago