ಶಿವಮೊಗ್ಗ: ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಗೀತಾ ಶಿವರಾಜ್ ಕುಮಾರ್ ಭರ್ಜರಿ ಮತಬೇಟೆ ನಡೆಸಿದರು. ಗೀತಾ ಅವರಿಗೆ ಪತಿ ಶಿವಣ್ಣ, ಕಾಂಗ್ರೆಸ್ ಮುಖಂಡರಾದ ಬಿ.ಕೆ.ಸಂಗಮೇಶ್, ಗೋಪಾಲಕೃಷ್ಣ ಬೇಳೂರು ಸಾಥ್ ನೀಡಿದರು.
ಭದ್ರಾವತಿಯಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು.. ಕಾರ್ಯಕರ್ತರ ಉತ್ಸಾಹ ನೋಡಿ ನನಗೆ ತುಂಬಾ ಸಂತೋಷ ಆಗುತ್ತಿದೆ. ಕಾರೇಹಳ್ಳಿಯಿಂದ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ. ಬೇಳೂರು ಗೋಪಾಲಕೃಷ್ಣ, ಬಿ.ಕೆ ಸಂಗಮೇಶ್ ನಮ್ಮ ಜೊತೆಗಿದ್ದಾರೆ. ಗೆಲ್ಲಬೇಕೆಂದು ಚುನಾವಣೆಗೆ ನಿಂತಿದ್ದೇನೆ. ವಾತಾವರಣ ತುಂಬಾ ಚೆನ್ನಾಗಿದೆ ಎಂದರು.
ಈಗಿನ ವಾತಾವರಣ ನೋಡಿದರೆ ನನ್ನ ಗೆಲುವಿಗೆ ಯಾವುದೇ ತೊಂದರೆ ಆಗುವುದಿಲ್ಲ. ಈ ಕ್ಷೇತ್ರದಲ್ಲಿ ಜನರು ನನ್ನನ್ನ ಉಳಿಸಿಕೊಳ್ಳುತ್ತಾರೆ ಎನ್ನುವ ನಂಬಿಕೆ ಇದೆ. ನಾವು ಫೈಟ್- ಗಿಟ್ ನೋಡುವುದಿಲ್ಲ. ಪಕ್ಷ ಏನು ಹೇಳುತ್ತೆ ಅದೇ ರೀತಿಯಲ್ಲಿ ಪ್ರಚಾರ ಆರಂಭಿಸಿದ್ದೇವೆ. ನಮ್ಮ ತಂದೆ ನಡೆದ ದಾರಿಯಲ್ಲೇ ನಾವು ನಡೆಯುತ್ತೇವೆ. ತಂದೆಯವರ ಸೇವೆ ನಮಗೆ ಅನುಕೂಲ ಆಗಲಿದೆ. ಪಂಚಾಯತ್ ಮಟ್ಟದಲ್ಲೂ ಪ್ರಚಾರ ಮಾಡಲು ಪ್ಲಾನ್ ಮಾಡಿದ್ದೇವೆ. ಸ್ಟಾರ್ ನಟರಿಗೆ ಆಹ್ವಾನ ನೀಡಿಲ್ಲ. ಬಿಸಿಲಿನಲ್ಲಿ ಅವರಿಗೂ ತೊಂದರೆ ಆಗುತ್ತೆ ಎಂದು ಆಹ್ವಾನ ನೀಡಿಲ್ಲ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…