ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್‍ವೈ ಹೆಸರು : ಸಿಎಂ ಬೊಮ್ಮಾಯಿ – Vishwnaews24
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್‍ವೈ ಹೆಸರು : ಸಿಎಂ ಬೊಮ್ಮಾಯಿ – Vishwnaews24
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು ಇಡಲು ಸಚಿವ ಸಂಪುಟ ತೀರ್ಮಾನಿಸಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿದೆ ಎಂದರು.
ಇನ್ನು ಶಿವಮೊಗ್ಗದ ವಿಮಾನ ನಿಲ್ದಾಣ ಕಾಮಗಾರಿಗಾಗಿ ರೈತರು ಹೆಚ್ಚುವರಿ ಜಮೀನು ನೀಡಿದ್ದು, ಅದಕ್ಕೆ ಪರಿಹಾರ ನೀಡಬೇಕಿದೆ. ರನ್‌ವೇ ಕಾಮಗಾರಿ ಪೂರ್ಣಗೊಳಿಸಲು, ವಿಮಾನ ನಿಲ್ದಾಣ ಸುತ್ತಲು ರಸ್ತೆ ನಿರ್ಮಾಣಕ್ಕೆ 40ರಿಂದ 50 ಕೋಟಿ ರೂ. ಅನುದಾನ ಬೇಕಿದ್ದು, ಈ ಹಣ ಒದಗಿಸಲು ಸರ್ಕಾರ ಸಿದ್ಧ ಎಂದಿದ್ದಾರೆ.
ಮಂಗಳೂರು: ಕಿಸಾನ್ ಕ್ರೆಡಿಟ್ ಕಾರ್ಡ್‍ನ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕರೆ – Vishwanews24
