Featured

ಶಿವಮೊಗ್ಗ:  ಸಮೀರ್ ತಂಗಿಯನ್ನು ಚುಡಾಯಿಸಿದ್ದಕ್ಕೆ ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ : ಎಸ್​ಪಿ ಜಿ.ಕೆ.ಮಿಥುನ್ ಕುಮಾರ್ – Vishwanews24

ಶಿವಮೊಗ್ಗ:  ಸಮೀರ್ ತಂಗಿಯನ್ನು ಚುಡಾಯಿಸಿದ್ದಕ್ಕೆ ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ : ಎಸ್​ಪಿ ಜಿ.ಕೆ.ಮಿಥುನ್ ಕುಮಾರ್

 ಶಿವಮೊಗ್ಗ: ಸಾಗರದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಶಿವಮೊಗ್ಗದ ಎಸ್​ಪಿ ಜಿ.ಕೆ.ಮಿಥುನ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಿಥುನ್ ಕುಮಾರ್, ವೈಯಕ್ತಿಕ ವಿಚಾರವಾಗಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಸಮೀರ್ ಹಲ್ಲೆ ಮಾಡಿದ್ದಾನೆ. ತಂಗಿಯನ್ನು ಸುನೀಲ್ ಚುಡಾಯಿಸಿದ್ದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು. 4-5 ತಿಂಗಳಿನಿಂದ ಸಮೀರ್ ತಂಗಿಯನ್ನು ಚುಡಾಯಿಸಿದ್ದ ಆರೋಪ ಮಾಡಿದ್ದಾನೆ ಎಂದಿದ್ದಾರೆ.

ಸಮೀರ್ ತಂಗಿಯ ಫೋನ್ ನಂಬರ್ ಕೇಳಿದ್ದ. ಇದೇ ವಿಚಾರವಾಗಿ ಸುನೀಲ್ ಹಾಗೂ ಸಮೀರ್ ನಡುವೆ ಗಲಾಟೆ ಆಗಿತ್ತು. ನಿನ್ನೆ ಮೇಕೆಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ಸಮೀರ್, ಸುನೀಲ್ ನನ್ನು ನೋಡಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿಸಿದ್ದಾರೆ.

ದಾಳಿಯ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬೇರೆ ಯಾರಾದರೂ ಪ್ರಕರಣದಲ್ಲಿ ಇದ್ದಾರೆಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸುನಿಲ್, ಸಮೀರ್ ಸಹೋದರಿಗೆ ಚುಡಾಯಿಸಿರುವ ಕಾಲ್ ರೆಕಾರ್ಡ್ಸ್ ಲಭ್ಯವಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್​​ಪಿ ಜಿ.ಕೆ.ಮಿಥುನ್ ಹೇಳಿದ್ದಾರೆ.

ಸಾಗರ ನಗರದ ಬಿ.ಎಚ್​.ರಸ್ತೆಯ ಬಸ್ ನಿಲ್ದಾಣ ಬಳಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಸಮೀರ್ ಮಚ್ಚು ಬೀಸಿದ್ದು, ಅದೃಷ್ಟವಶಾತ್​ ಕೂದಲೆಳೆ ಅಂತರದಲ್ಲಿ ದಾಳಿಯಿಂದ ಸುನೀಲ್ ಪಾರಾಗಿದ್ದ. ದಾಳಿಗೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

Vishwa News 24

Recent Posts

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ : ದೇಶಾದ್ಯಂತ ‘ಸೇವಾ ಸಂಕಲ್ಪʼ ಅಭಿಯಾನ – vishwanews24

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ;  ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ:…

8 minutes ago

ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ – vishwanews24

 ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ…

19 minutes ago

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

20 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

21 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

22 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

22 hours ago