Featured

ಶಿವಮೊಗ್ಗ : ಸ್ಮಾರ್ಟ್ ಸಿಟಿ ಕಾಮಗಾರಿಗಳ ಉದ್ಘಾಟನೆ ಮಾಡಿದ ಮೋದಿ – Vishwanews24

ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ -ಬಿಎಸ್​ವೈ

ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಸ್ಮಾರ್ಟ್​ಸಿಟಿ ಕಾಮಗಾರಿ, ಶಿಮುಲ್​ ಹಾಲು ಪ್ಯಾಕಿಂಗ್​ ಘಟಕ, ಮಾಮ್​​ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು.

ಶಿವಮೊಗ್ಗದಲ್ಲಿ ನೂತನ ಏರ್​ಪೋರ್ಟ್​ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಷಣ ಮಾಡಿದ್ದು ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ. ಇವರು ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟಿಸಿರುವುದು ಸಂತಸ ತಂದಿದೆ. ಕೊಟ್ಟ ಮಾತಿನಂತೆ ಏರ್​ಪೋರ್ಟ್​ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್​ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

9 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

9 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

10 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

11 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

11 hours ago