Featured

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ  : ಎನ್‌ಐಎ ತನಿಖೆಗೆ – Vishwanews24

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ  : ಎನ್‌ಐಎ ತನಿಖೆಗೆ – Vishwanews24

ಶಿವಮೊಗ್ಗ : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆಯು ಎನ್ ಐಎ ತನಿಖೆಗೆ ವಹಿಸಿದೆ.

ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಸುಪರ್ದಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವೆ, ಶಿವಮೊಗ್ಗ ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಎನ್ ಐಎ ಯು ನಂಬಿಕಸ್ಥ ಏಜೆನ್ಸಿಯಾಗಿದ್ದು, ಎನ್‌ಐಎ ತನಿಖೆಗೊಪ್ಪಿಸಿದರೆ ಹರ್ಷ ಕುಟುಂಬಸ್ಥರಿಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಗೃಹ ಇಲಾಖೆಯು ಈ ಪ್ರಕರಣವನ್ನು ಎನ್ ಐಎ ತನಿಖೆಗೆ ಒಪ್ಪಿಸಿದೆ. ರಾಷ್ಟ್ರೀಯ ತನಿಖಾ ದಳವು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲು ಮಾಡಿಕೊಂಡಿದ್ದು, ಶೀಘ್ರ ತನಿಖೆ ಆರಂಭವಾಗಲಿದೆ.

ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷನ ಮೇಲೆ ದುಷ್ಕರ್ಮಿಗಳು ಫೆಬ್ರವರಿ 20 ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ನಡೆಸಿದ್ದರು. ಈ ಪ್ರಕರಣವು ರಾಜ್ಯಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದಲ್ಲದೆ, ಆರೋಪಿಗಳ ಶೀಘ್ರ ಪತ್ತೆಗಾಗಿ ಹಿಂದೂಪರ ಸಂಘಟನೆಗಳು, ಜನಸಾಮಾನ್ಯರು ಒತ್ತಾಯಿಸಿದ್ದರು. ಅಲ್ಲದೆ, ಹರ್ಷ ಕೊಲೆ ಹಿನ್ನೆಲೆಯಲ್ಲಿ ಶಿವಮೊಗ್ಗ ಬಂದ್ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಲಾಗಿತ್ತು.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

1 hour ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

1 hour ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

1 hour ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago