ಮುಂಬೈ: ಶಿವಸೆನೆ ಜತೆಗೆ ಮೈತ್ರಿ ಕಷ್ಟವಾಗಿರುವ ಹಿನ್ನಲೆಯಲ್ಲಿ ತಮ್ಮ ಪಕ್ಷದ ನಾಯಕರಿಗೆ 2019 ರ ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರೆಕೊಟ್ಟಿದ್ದಾರೆ.
ಶಿವಸೇನೆಯನ್ನು ನಂಬುತ್ತಾ ಕೂತರೆ ಇನ್ನು ಮಹಾರಾಷ್ಟ್ರದಲ್ಲಿ ಪ್ರಚಾರ ಕಷ್ಟ ಎಂದು ಬಿಜೆಪಿಗೆ ಈಗ ಅರಿವಾಗಿದೆ. ಅವಿಶ್ವಾಸ ಮತ ಸಂದರ್ಭದಲ್ಲಿಯೂ ಶಿವಸೇನೆ ಕೊನೆ ಕ್ಷಣದಲ್ಲಿ ಕೈ ಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲು ಕರೆ ಕೊಟ್ಟಿದ್ದಾರೆ.
ಶಿವಸೇನೆ ಬಂದರೆ ಸ್ವಾಗತ. ಇಲ್ಲವಾದರೆ ಏಕಾಂಗಿಯಾಗಿ ಆದರೂ ಸರಿಯೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕೆಲಸ ಮಾಡುವಂತೆ ಅಮಿತ್ ಶಾ ಪಕ್ಷದ ನಾಯಕರಿಗೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಶಿವಸೇನೆಯ ವಿರುದ್ಧ ಏಕಾಂಗಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಬೇಕು ಎಂದು ಷಾ ಕರೆ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಬೇಕು, ಇದಕ್ಕಾಗಿ ಈಗಿಂದಲೇ ಸಜ್ಜಾಗಿ ಎಂದು ಅಮಿತ್ ಷಾ ಸೂಚಿಸಿದ್ದಾರೆ. ಬಿಜೆಪಿಯ ಯುವ ಕಾರ್ಯಕರ್ತರನ್ನೇ ಹೆಚ್ಚು ಟಾರ್ಗೆಟ್ ಮಾಡಿರುವ ಷಾ, ಪಕ್ಷದ ಮುಖಂಡರಲ್ಲಿ ಈ ಬಗ್ಗೆ ಹೆಚ್ಚು ಸಕ್ರೀಯರಾಗುವಂತೆ ಸೂಚಿಸಿದ್ದಾರೆ. ಇದಕ್ಕಾಗಿಯೇ ಷಾ ಒಟ್ಟು ೨೩ ಅಂಶಗಳ ಹೊಸ ಕಾರ್ಯ ಯೋಜನೆಯನ್ನು ತಯಾರಿಸಿದ್ದು ಯುವ ಕಾರ್ಯಕರ್ತರೊಂದಿಗೆ ಹಂಚಿಕೊಂಡಿದ್ದಾರೆ.!
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…