ಚಿತ್ರದುರ್ಗ: ಆರ್‌ಎಸ್‌ಎಸ್ ಬಗ್ಗೆ ಮಾತನಾಡೋದು ಬೆಂಕಿ ಜೊತೆ ಸರಸವಿದ್ದಂತೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೊಸದುರ್ಗ ಪಟ್ಟಣದಲ್ಲಿ ಎಚ್ಚರಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕು ಸ್ಥಾಪನೆ ನೆರೆವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆಹರು ಹಾಗೂ ಇಂದಿರಾಗಾಂಧಿ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿ ಅನುಭವಿಸಿದ್ದಾರೆ. ಹೀಗಾಗಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್‍ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಅವರಿಗೆ ಹೇಳಲು ಬಯಸುತ್ತೇನೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡೋದು ಬೆಂಕಿ ಜತೆ ಸರಸವಾಡಿದಂತೆ ಎಂದು ಎಚ್ಚರಿಸಿದ್ದಾರೆ.
ರಾಮನ ಬಗ್ಗೆ ರಾವಣನಿಗೆ ಎಲ್ಲಾ ಗೊತ್ತಿತ್ತು. ಆದರೆ ಶಿವಾಜಿ ಬಗ್ಗೆ ಔರಂಗಜೇಬ್ ಗೆ ಏನೂ ಗೊತ್ತಿರಲಿಲ್ಲ. ಹೀಗಾಗಿ ಅಂದು ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ. ಹಾಗೆಯೇ ಆರ್‌ಎಸ್‌ಎಸ್ ಇಲ್ಲದಿದ್ದರೆ ಯೋಚನೆ ಮಾಡಬೇಕಿತ್ತು. ಎಂದೋ ಈ ದೇಶ ಪಾಕಿಸ್ತಾನವೋ, ಇನ್ನೊಂದೆನೋ ಆಗುತ್ತಿತ್ತು. ಆದರೆ ಮುಸ್ಲಿಂ ಮತಕ್ಕಾಗಿ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡ್ತಿದ್ದಾರೆ. ಅವರೊಂದಿಗೆ ಕ್ರೈಸ್ತರ ಸಭೆಗೆ ಹೋಗಿ ಅವರ ಸಂತೃಪ್ತಿಗೊಳಿಸಲು ಹೆಚ್‍ಡಿಕೆ ಸಹ ಅವರನ್ನು ಅನುಸರಿಸಿ ಕ್ರೈಸ್ತರನ್ನ ಓಲೈಸುವ ಮಾತನಾಡ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಶಿರ್ವ: ನೀರು ಪಾಲಾಗಿದ್ದ ದೈವ ನರ್ತಕನ ಮೃತದೇಹ ಪತ್ತೆ – Vishwanews24
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…