Featured

ಶಿಷ್ಯನ ಭ್ರಷ್ಟಾಚಾರವನ್ನು ಹೊರಗೆಡವಲು ಗುರು ಪ್ರಮೋದ್ ಮುತಾಲಿಕ್ ಕಾರ್ಕಳಕ್ಕೆ ಆಗಮಿಸಿದ್ದಾರೆ : ಮಂಜುನಾಥ ಪೂಜಾರಿ – Vishwanews24

ಶಿಷ್ಯನ ಭ್ರಷ್ಟಾಚಾರವನ್ನು ಹೊರಗೆಡವಲು ಗುರು ಪ್ರಮೋದ್ ಮುತಾಲಿಕ್ ಕಾರ್ಕಳಕ್ಕೆ ಆಗಮಿಸಿದ್ದಾರೆ ..

ತಮ್ಮ ಬೇಳೆ ಬೇಯಿಸಿಕೊಳ್ಳಲು ಸುನೀಲ್‍ಕುಮಾರ್ ಸರಕಾರಿ ಯಂತ್ರ ದುರುಪಯೋಗ..

ಕಾಂಗ್ರೆಸ್ ಅವಧಿಯಲ್ಲಿ ಕಾರ್ಕಳ ಸಾಕಷ್ಟು ಅಭಿವೃದ್ಧಿ ಹೊಂದಿತ್ತು..

ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ

ಕಾರ್ಕಳ : ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನೀಲ್‍ಕುಮಾರ್ ಸರಕಾರಿ ಯಂತ್ರವನ್ನು ದುರುಪಯೋಗಪಡಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯ ಸ್ಥಿತಿಗತಿ ದುರ್ಬಲವಾಗತೊಡಗಿದೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಆರೋಪಿಸಿದ್ದಾರೆ.

ಕಾರ್ಕಳದ ಹೋಟೆಲ್ ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿಷ್ಯನ ಭ್ರಷ್ಟಾಚಾರವನ್ನು ಹೊರಗೆಡವಲು ಗುರು ಪ್ರಮೋದ್ ಮುತಾಲಿಕ್ ಕಾರ್ಕಳ್ಕಕೆ ಆಗಮಿಸಿದ್ದಾರೆ. ಚುನಾವಣಾ ಸ್ವರ್ಧೆ ಕಣದಲ್ಲಿ ಅವರು ಉತ್ತರಿಸಲಿದ್ದಾರೆ. ಪ್ರಖರ ಆರೋಪಗಳು ಸುನೀಲ್ ಅವರ ರಾಜಕೀಯ ಬೆಳವಣಿಗೆ ಕುಂಠಿತಗೊಳ್ಳಲಿದೆ. ಪಂಚಾಯತ್ ಮಟ್ಟದಿಂದ ತಾಲೂಕು ಕಚೇರಿಯವರೆಗೆ ಭ್ರಷ್ಟಾಚಾರವು ವ್ಯಾಪಕವಾಗಿ ಹರಡಿದ್ದು ಕಾನೂನು ಸುವ್ಯವಸ್ಥೆ ನೀತಿ ನಿಯಮಗಳಿಗೆ ಬೆಲೆ ಇಲ್ಲದಂತಾಗಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರು ಹೋಗಿ ಲಂಚ ಇಲ್ಲದೇ ಕೆಲಸ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರು ಭಾರಿ ಚುನಾಯಿತರಾಗಿ ಮುಖ್ಯಮಂತ್ರಿಯಾಗಿರುವ ಎಂ. ವೀರಪ್ಪ ಮೊಯಿಲಿ ಹಾಗೂ ಎರಡು ಬಾರಿ ಶಾಸಕರಾಗಿದ್ದ ಎಚ್. ಗೋಪಾಲ ಭಂಡಾರಿ ಅವರ ಅವಧಿಯಲ್ಲಿ ಕಾರ್ಕಳ ಸಾಕಷ್ಟು ಅಭಿವೃದ್ಧಿ ಹೊಂದಿತ್ತು. ಗ್ರಾಮೀಣ ಭಾಗದಲ್ಲಿ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳು,ಆಸ್ಪತ್ರೆಗಳು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿತ್ತು. ಸರಕಾರಿ ಇಲಾಖೆಗಳಲ್ಲಿ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಹುದ್ದೆಗಳು ಭರ್ತಿಯಾಗಿ ಜನಸಾಮಾನ್ಯರ ಕೆಲಸ ಕಾರ್ಯಗಳು ನಿರಂತರವಾಗಿ ಸಾಗುತ್ತಿತ್ತು. ಆದರೆ ಇಂದು ಅದೇ ಇಲಾಖೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಇಲ್ಲ. ಆಸ್ಪತ್ರೆಯಲ್ಲಿ ವೈದ್ಯರ ಹುದ್ದೆಗಳು ಖಾಲಿ ಖಾಲಿ. ಇದು ಜನಸಾಮಾನ್ಯರ ಆರೋಗ್ಯದ ಕುರಿತು ಸರಕಾರವು ನಿರ್ಲಕ್ಷ್ಯಿಸುತ್ತಿದೆ ಎಂಬುವುದಕ್ಕೆ ಹಿಡಿದ ಕೈಗನ್ನಡಗಿಯಾಗಿದೆ ಎಂದು ಅವರು ಆರೋಪಿಸಿದರು.

ಕಮಿಷನ್ ಲೆಕ್ಕಾಚಾರದಲ್ಲಿ ಎಲ್ಲಾ ಇಲಾಖೆಗಳಲ್ಲಿ ವ್ಯವಹಾರ ಸಾಗುತ್ತಿದೆ. ಇಲ್ಲದೇ ಹೋದಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಿ ಸಚಿವರ ಆಪ್ತರೆಂದು ಗುರುತಿಸಿ ಕೊಂಡವರು ಎಲ್ಲ ಕಾನೂನು ನೀತಿ ನಿಯಮಗಳನ್ನು ಮಾಡಿ ಗಣಿಗಾರಿಕೆ ಕಲ್ಲು ಕೋರೆ ಪರವಾನಿಗೆ ಇಲ್ಲದೇ ಹೊಯಿಗೆ ದಂಧೆ, ಲೈಸೆನ್ಸ್ ಇಲ್ಲದೆ ಜುಗಾರಿ ಅಡ್ಡೆಗಳು, ಕಂದಾಯ ಇಲಾಖೆಯ ಅಡಿಯಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ಸಚಿವರ ಆಪ್ತರು ನಡೆಸುತ್ತಿರುವ ಎಲ್ಲ ಹಗರಣಗಳು ಪೊಲೀಸ್ ಇಲಾಖೆ, ಕಂದಾಯ ಇಲಾಖೆಯನ್ನು ಮನ ಬಂದಂತೆ ಸಚಿವರ ಏಜೆಂಟ್‍ರು ನಡೆಸುತ್ತಿರುವ ಅವ್ಯವವಹಾರಗಳು ತಮಗೆ ಈಗಾಗಲೇ ಮಾಹಿತಿ ಇದೆ. ಎಲ್ಲ ಇಲಾಖೆಗಳಲ್ಲಿ ಕಾಂಟಾಕ್ಟ್ ವ್ಯವಸ್ಥೆ ಬೆಳಕಿನ ಯೋಜನೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ರೈತರಿಗೆ, ಕೃಷಿ, ವಿದ್ಯುತ್ ತಾಂತ್ರಿಕ ಸಲಕರಣೆಗಳಿಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ನೇಮಕಾತಿಯಲ್ಲಿ ಲಂಚ. ಇಂತಹ ಸಚಿವರು ಕಾರ್ಕಳದ ಸಂಸ್ಕೃತಿಗೆ ಅರ್ಹರಲ್ಲ ಎಂದು ಇದೇ ಸಂದರ್ಭದಲ್ಲಿ ಮಂಜುನಾಥ ಪೂಜಾರಿ ವಾಗ್ದಾಳಿ ನಡೆಸಿದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್‌ನ ಸದಾಶಿವ ದೇವಾಡಿಗ, ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್, ಪ್ರಭಾಕರ್ ಬಂಗೇರ, ಬಾನು ಭಾಸ್ಕರ್, ಜಾಯ್ ಟೆಲ್ಲಿಸ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago