Featured

ಶೀಘ್ರದಲ್ಲಿಯೇ ಗೃಹಲಕ್ಷ್ಮೀ 24ನೇ ಕಂತಿನ ಹಣ ಬಿಡುಗಡೆ : ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಶೀಘ್ರದಲ್ಲಿಯೇ ಗೃಹಲಕ್ಷ್ಮೀ 24ನೇ ಕಂತಿನ ಹಣ ಬಿಡುಗಡೆ : ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ರಾಜ್ಯದ ಗೃಹಲಕ್ಷ್ಮೀ ಯೋಜನೆಯಡಿ 24ನೆ ಕಂತಿನ ಹಣವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ ಹಣ ಬಿಡುಗಡೆಯ ಪ್ರಕ್ರಿಯೆಗಳು ಆರಂಭವಾಗಲಿವೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಹಣ ಬ್ಯಾಂಕ್ ಖಾತೆಗಳಿಗೆ ಜಮೆ ಆಗಲಿವೆ ಭರವಸೆ ನೀಡಿದರು.

ಮೃತಪಟ್ಟವರ ಖಾತೆಗಳಿಗೂ ಗೃಹಲಕ್ಷ್ಮೀಯ ಹಣ ರವಾನೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಸಿದ ಅವರು, ಒಂದು ಕಂತು ಆ ರೀತಿ ಪಾವತಿಯಾಗಿರುವ ಮಾಹಿತಿ ಇದೆ. ಅದನ್ನು ತಡೆಯಲು ಈಗಾಗಲೇ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಎರಡು ಸಭೆಗಳನ್ನು ನಡೆಸಲಾಗಿದೆ. ವಿಶೇಷವಾದ ಸಾಫ್ಟ್‌ ವೇರ್ ಬಳಸಿ ಮುಂದೆ ಮೃತಪಟ್ಟವರ ಖಾತೆಗಳಿಗೆ ಹಣ ಸಂದಾಯವಾಗದಂತೆ ತಡೆಯಲಾಗುವುದು ಎಂದು ಅವರು ಹೇಳಿದರು.

ಬಾಗಲಕೋಟೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಬುದ್ಧಿಮಾಂದ್ಯ ಶಾಲೆಯನ್ನು ನಡೆಸಲಾಗುತ್ತಿದೆ. ಈ ಘಟನೆಯಿಂದ ಸರಕಾರಕ್ಕೂ ಮುಜುಗರವಾಗುತ್ತಿದ್ದು, ಅಧಿಕಾರಿಗಳನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಲಾಗಿದೆ. ಪೊಲೀಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಸಂಸ್ಥೆಯನ್ನು ಮುಚ್ಚಿಸಲಾಗುವುದು. ಅಲ್ಲಿರುವ ಮಕ್ಕಳನ್ನು ಸರಕಾರದ ಅನುದಾನಿತ ಶಾಲೆಗಳು ಮತ್ತು ಇತರ ಪಾಲನಾ ಕೇಂದ್ರಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

15 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

15 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

15 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

16 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

17 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

17 hours ago