ಬೆಂಗಳೂರು: ಡಿಸೆಂಬರ್ 7ರಂದು ಪ್ರಾರಂಭವಾಗಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.
ಶುಕ್ರವಾರ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಭು ಚವ್ಹಾಣ್, ಪರಿಷ್ಕೃತ ಹಾಗೂ ಸಮಗ್ರ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಗೋಹತ್ಯೆ ನಿಷೇಧ ಮಸೂದೆಯನ್ನು 2010ರಲ್ಲಿ ರಾಜ್ಯ ಸರ್ಕಾರ ಅಂಗೀಕರಿಸಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆದರೆ, ಆಗಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತಿರಸ್ಕರಿಸಿತ್ತು. ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಬದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…