ಮಂಗಳೂರು : ಮಂಗಳೂರು ಹಾಗೂ ಬೆಂಗಳೂರು ನಡುವೆ ಪ್ರಯಾಣಕ್ಕೆ ಹೊಸ ’ವಂದೇ ಮಾತರಂ’ ರೈಲು ಆರಂಭಿಸಲಾಗುವುದು ಎಂದು ರೈಲ್ವೇ ಸಚಿವ ಪಿಯುಷ್ ಗೋಯಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವರು ’ವಂದೇ ಮಾತರಂ’ ಸೆಮಿ ಹೈಸ್ಪೀಡ್ ವಿಭಾಗಕ್ಕೆ ಒಳಪಟ್ಟಿದ್ದು ಮೇಕ್ ಇನ್ ಇಂಡಿಯಾ ಯೋಜನೆಯ ಅಡಿಯಲ್ಲಿ ತಯಾರಿಸಲ್ಪಟ್ಟದ್ದಾಗಿದೆ. ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಈ ರೈಲು ಅತ್ಯಾಧುನಿಕ ಸೌಕರ್ಯಗಳನ್ನು ಒಳಗೊಂಡಿದೆ.
”ಇದು ಸ್ವದೇಶಿ ತಂತ್ರಜ್ಞಾನದಡಿ ಅಭಿವೃದ್ಧಿಯಾಗಿರುವ ಹೈ ಸ್ಪೀಡ್ ಟ್ರೈನ್ ಆಗಿದೆ” ಎಂದು ರೈಲ್ವೆ ಸಚಿವರು ತಿಳಿಸಿದರು. ಜತೆಗೆ, ”ಈ ರೈಲ್ವೆ ಮಾರ್ಗಗಳಲ್ಲಿ ಶೀಘ್ರದಲ್ಲೇ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗುವುದು” ಎಂದು ಪಿಯೂಶ್ ಗೋಯಲ್ ಮಾಹಿತಿ ನೀಡಿದರು.
“ಮೊದಲ ಬಾರಿಗೆ ಮಂಗಳೂರು-ಬೆಂಗಳೂರು-ಚೆನ್ನೈ ಹಾಗೂ ಮಂಗಳೂರು- ಹೈದರಬಾದ್ ನಗರಗಳನ್ನು ಸಂಪರ್ಕಿಸುವ ವಂದೇ ಮಾತರಂ ರೈಲು ಪ್ರಯಾಣಿಕರಿಗೆ ಹೆಚ್ಚಿನ ಉಪಕಾರಿಯಾಗಲಿದೆ. ಈ ಹೊರತು ಮುಂದಿನ ಆರು ತಿಂಗಳುಗಳಲ್ಲಿ ದೇಶದ ಹೆಚ್ಚಿನ ರೈಲು ನಿಲ್ದಾನಗಳಲ್ಲಿ ವೈ ಫೈ ಸೌಲಭ್ಯ ನೀಡಲಾಗುವುದು” ಎಂದು ಅವರು ಹೇಳಿದರು..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…