ಮಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಿಂದ -ಕರಾವಳಿಗೆ “ವಂದೇ ಭಾರತ್” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುವುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ನಳಿನ್ x ಮಾಡಿದ್ದು ” ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಕಾಸರಗೋಡು ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಒತ್ತಾಯಕೇಳಿಬಂದಿತ್ತು. ಅಲ್ಲದೇ ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು. ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಜೊತೆಗೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸಬೇಕು ಎಂಬ ಕರಾವಳಿ ಭಾಗದ ಜನರು ಬೇಡಿಕೆಯೂ ಇಡೇರುವ ಲಕ್ಷಣ ಗೋಚರಿಸುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…