Featured

ಶೀಘ್ರದಲ್ಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲು : ನಳಿನ್ ಕಟೀಲ್ – vishwanews24

ಶೀಘ್ರದಲ್ಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲು : ನಳಿನ್ ಕಟೀಲ್

ಮಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಿಂದ -ಕರಾವಳಿಗೆ “ವಂದೇ ಭಾರತ್‌” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುವುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಬಗ್ಗೆ ನಳಿನ್ x ಮಾಡಿದ್ದು ” ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಕಾಸರಗೋಡು ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಒತ್ತಾಯಕೇಳಿಬಂದಿತ್ತು. ಅಲ್ಲದೇ ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು. ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಜೊತೆಗೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸಬೇಕು ಎಂಬ ಕರಾವಳಿ ಭಾಗದ ಜನರು ಬೇಡಿಕೆಯೂ ಇಡೇರುವ ಲಕ್ಷಣ ಗೋಚರಿಸುತ್ತಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

22 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

22 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

23 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

23 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

23 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

23 hours ago