ಲಖನೌ : ಅಯೋಧ್ಯೆಯಲ್ಲಿ ಶ್ರೀರಾಮನ 251 ಮೀಟರ್ ಎತ್ತರದ ಪ್ರತಿಮೆ ನಿರ್ಮಾಣ ಮಾಡುವ ಯೋಜನೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅನುಮೋದನೆ ನೀಡಿದ್ದಾರೆ.
ಶಕ್ತಿ ಸಮಿತಿ ಸಭೆಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಅಯೋಧ್ಯೆಯಲ್ಲಿರುವ ಸರಯೂ ನದಿ ಸಮೀಪದಲ್ಲಿ ಸುಮಾರು 100 ಹೆಕ್ಟೇರ್ ಪ್ರದೇಶದಲ್ಲಿ ಶ್ರೀರಾಮನ ಪ್ರತಿಮೆ ನಿರ್ಮಾಣವಾಗಲಿದೆ. ಸದ್ಯದಲ್ಲೇ ಪ್ರತಿಮೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಮನ ಪ್ರತಿಮೆ ನಿರ್ಮಾಣಕ್ಕಾಗಿ ಗುಜರಾತ್ ಸರ್ಕಾರದಿಂದ ತಾಂತ್ರಿಕ ಸಹಾಯ ಹಾಗೂ ಮಾರ್ಗದರ್ಶನ ಪಡೆಯಲು ನಾವು ತೀರ್ಮಾನಿಸಿದ್ದು, ಈ ಸಂಬಂಧ ಗುಜರಾತ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲು ನಿರ್ಧರಿಸಿದೆ. ಶ್ರೀರಾಮನ ಥೀಮ್ ಗಳನ್ನೊಳಗೊಂಡ ಡಿಜಿಟಲ್ ಮ್ಯೂಸಿಯಂ, ವಿಶ್ಲೇಷಣಾ ಕೇಂದ್ರ, ಪುಸ್ತಕಾಲಯ, ಪಾರ್ಕಿಂಗ್, ಆಹಾರ ಮಳಿಗೆಗಳೆಲ್ಲ ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿ ಒಳಗೊಂಡಿರುತ್ತದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ನರ್ಮದಾ ಸರೋವರದ ದಡದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಎತ್ತರದ ಏಕತಾಮೂರ್ತಿ ವಿಶ್ವದಲ್ಲೇ ಅತಿ ಎತ್ತರದ ಪ್ರತಿಮೆಯಾಗಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಿದ್ದಾರೆ. 251 ಮೀಟರ್ ಎತ್ತರ ರಾಮನ ಮೂರ್ತಿ ನಿರ್ಮಾಣವಾದರೆ ಅದು ಏಕತಾ ಮೂರ್ತಿಯ ಎತ್ತರವನ್ನೂ ಮೀರಿಸಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…