ಭಾರತದಲ್ಲಿ ಅತೀ ಹೆಚ್ಚು ಮಂದಿ ಬಳಕೆದಾರರನ್ನು ಹೊಂದಿರುವ ಮೂಲಕ ದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿರುವ ಫೇಸ್‌ಬುಕ್ ಮಾಲೀಕತ್ವದ ವಾಟ್ಸ್‌ಆಪ್, ಸೋಶಿಯಲ್ ಮೆಸೆಂಜಿಗ್ ಆಪ್ ಸಾಲಿನಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಆಪ್ ಶೀಘ್ರವೇ ಚೀನಾದಂತೆ ಭಾರತೀಯ ಮಾರುಕಟ್ಟೆಯಲ್ಲಿಯೂ ಬ್ಯಾನ್ ಆಗುವ ಸಾಧ್ಯತೆ ಇದೆ. ಈಗಾಗಲೇ ವಾಟ್ಸ್‌ಆಪ್ ಮೇಲೆ ನಿಯಂತ್ರಣ ಸಾಧಿಸಲು ಮುಂದಾಗಿರುವ ಸರಕಾರ, ತನ್ನ ಹಿಡಿತಕ್ಕೆ ಸಿಗದ ವಾಟ್ಸ್‌ಆಪ್ ಮೇಲೆ ನಿಷೇಧದ ದಂಡ ಪ್ರಯೋಗಕ್ಕೆ ಮುಂದಾಗಲಿದೆ ಎನ್ನಲಾಗಿದೆ.
ದೇಶದಲ್ಲಿ ಅತೀ ಹೆಚ್ಚಿನ ಪ್ರಮಾಣದ ಹಿಂಸಾಚಾರಕ್ಕೆ ಮತ್ತು ನಕಲಿ ಸುದ್ದಿಯನ್ನು ಹರಡಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಾಣವಾಗಲು ವಾಟ್ಸ್‌ಆಪ್ ಸಂದೇಶಗಳೇ ನೇರ ಕಾರಣ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ನಕಲಿ ಸುದ್ದಿಯನ್ನು ನಿಯಂತ್ರಿಸುವ ವಿಷಯದಲ್ಲಿ ವಾಟ್ಸ್‌ಆಪ್ ಸರಕಾರದೊಂದಿಗೆ ಸಮರ ನಡೆಸಲು ಶುರು ಮಾಡಿದೆ.
ಸುಳ್ಳು ಸುದ್ದಿ ತಡೆಗೆ: ವಾಟ್ಸ್‌ಆಪ್‌ನಿಂದಾಗಿ ಕೋಮುಗಲಭೆ, ಗುಂಪು ಹಲ್ಲೆ, ಅಮಾಯಕರ ಮೇಲೆ ದಾಳಿ, ಸುಳ್ಳು ಸುದ್ದಿ, ವ್ಯಕ್ತಿ ನಿಂದನೆ ಸೇರಿದಂತೆ ಹಲವು ಮಾದರಿಯ ತೊಂದರೆಗಳು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಅಧಿಕ ಮಂದಿ ಬಳಕೆದಾರರು ಕಣ್ಣು ಮುಚ್ಚಿ ವಾಟ್ಸ್‌ಆಪ್‌ನಲ್ಲಿ ಬರುವ ಮಾಹಿತಿಗಳನ್ನು ನಂಬುವುದು ಮತ್ತು ಅದನ್ನು ಬೇರೆಯವರಿಗೆ ಶೇರ್ ಮಾಡುತ್ತಿರುವುದು. ಈ ಹಿನ್ನಲೆಯಲ್ಲಿ ಈ ಪರಿಸ್ಥಿತಿಯನ್ನು ಸುಧಾರಿಸಲು ವಾಟ್ಸ್‌ಆಪ್ ಹೆಚ್ಚಿನ ಶ್ರಮ ವಹಿಸಬೇಕು ಎಂದು ಎಂದು ಕೇಂದ್ರ ಸರಕಾರ ಬಯಸುತ್ತಿದೆ.
ಕೇಂದ್ರದ ಪಟ್ಟು: ಇದಲ್ಲದೇ ಕೇಂದ್ರ ಸರಕಾರವೂ ವಾಟ್ಸ್‌ಆಪ್ ಮೂಲಕ ಸುಳ್ಳು ಸುದ್ದಿಯನ್ನು ಹಂಚುವವರನ್ನು ಶಿಕ್ಷಿಸುವ ಕಾರ್ಯಕ್ಕೆ ಮುಂದಾಗಿದೆ. ಇದಕ್ಕಾಗಿ ಸುಳ್ಳು ಸುದ್ದಿಯ ಮೂಲಕದ ಬಗ್ಗೆ ಮಾಹಿತಿ ನೀಡುವಂತೆ ವಾಟ್ಸ್‌ಆಪ್‌ಗೆ ಸರಕಾರ ಮನವಿ ಮಾಡಿದೆ ಎನ್ನಲಾಗಿದೆ.
ದೇಶದ ಸುರಕ್ಷತೆ: ಇದಲ್ಲದೇ ದೇಶದ ಸುರಕ್ಷತೆಯ ದೃಷ್ಠಿಯಿಂದ ವಾಟ್ಸ್‌ಆಪ್ ಸುಳ್ಳು ಸುದ್ದಿಯನ್ನು ತಡೆಯಬೇಕು. ಇಲ್ಲವಾದರೆ ಇದರಿಂದಾಗಿ ಮೊಟ್ಟ ಮಟ್ಟದಲ್ಲಿ ಭದ್ರತೆಗೆ ಅಪಾಯ ಇರುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ವಾಟ್ಸ್‌ಆಪ್ ಅನ್ನು ಬಂದ್ ಮಾಡಿಸಲು ಕೇಂದ್ರ ಸರಕಾರವು ಚಿಂತನೆ ನಡೆಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…