Featured

ಶೀಘ್ರವೇ ಬರಲಿದೆ ಹೊಸ ವಿನ್ಯಾಸದ 20 ರೂ. ಹೊಸ ನೋಟು – Vishwanews24

ನವದೆಹಲಿ: ಶೀಘ್ರವೇ ನಿಮಗೆ ಹೊಸ 20 ರೂಪಾಯಿ ನೋಡಲು ಸಿಗಲಿದೆ. ಆರ್.ಬಿ.ಐ. ಶುಕ್ರವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. ಆರ್.ಬಿ.ಐ. ಹೊಸ 20 ರೂಪಾಯಿ ಬಣ್ಣ ಸೇರಿದಂತೆ ಎಲ್ಲದರ ಬಗ್ಗೆ ಮಾಹಿತಿ ನೀಡಿದೆ. ನೋಟಿನ ಬಣ್ಣ ಹಸಿರು ಮಿಶ್ರಿತ ಹಳದಿಯಾಗಿರಲಿದೆ.
ಹೊಸ 20 ರೂಪಾಯಿಯಲ್ಲಿ ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ಸಹಿಯಿರಲಿದೆ. ಜೊತೆಗೆ ದೇಶದ ಸಂಸ್ಕೃತಿ ಬಿಂಬಿಸುವ ಎಲ್ಲೋರು ಗುಹೆಗಳ ಚಿತ್ರವಿರಲಿದೆ. ಮಹಾತ್ಮಾ ಗಾಂಧಿ ಸರಣಿಯ ಹೊಸ ನೋಟಿನ ಜೊತೆ ಹಳೆ 20 ರೂಪಾಯಿ ನೋಟು ಕೂಡ ಚಾಲ್ತಿಯಲ್ಲಿರಲಿದೆ ಎಂದು ಆರ್.ಬಿ.ಐ. ಹೇಳಿದೆ.
ಇನ್ನು ಈ ಹೊಸ ನೋಟು ಚಲಾವಣೆಗೆ ಬಂದ ನಂತರ ಸಹ ಹಳೆಯ 20 ರು. ನೋಟುಗಳು ಹಾಗೆಯೇ ಚಲಾವಣೆಯಲ್ಲಿರಲಿದ್ದು ಇದಕ್ಕೆ ಯಾವ ಕಾನೂನಿನ ಅಡ್ಡಿ ಇರುವುದಿಲ್ಲ ಎಂದು ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ.
ಹೊಸ ನೋಟಿನಲ್ಲಿ ಜ್ಯಾಮಿತಿಯ ವಿನ್ಯಾಸಗಳನ್ನು ಚಿತ್ರಿಸಲಾಗಿದ್ದು ನೋಟಿನ ಎರಡೂ ಭಾಗಗಳಲ್ಲಿ ಬೇರೆ ಬೇಈ ಮಾದರಿಯ ಚಿತ್ತಾರವಿರಲಿದೆ .
ಇದು ಮಧ್ಯದಲ್ಲಿ ಮಹಾತ್ಮ ಗಾಂಧಿಯ ಭಾವಚಿತ್ರವನ್ನು ಹೊಂದಿ ಸೂಕ್ಷ್ಮ ಅಕ್ಷರಗಳಲ್ಲಿ ‘ಆರ್ಬಿಐ’, ‘ಭಾರತ್’, ‘ಇಂಡಿಯಾ’ ಮತ್ತು ’20 ‘ ಎಂದು ಬರೆಯಲಾಗಿದೆ. ಆರ್ಬಿಐ ಲಾಂಛನದೊಂದಿಗೆ ಗವರ್ನರ್ ಸಹಿ, ಸಹ ನೋಟಿನಲ್ಲಿ ಇರಲಿದೆ. ಗಾಂಧಿ ಭಾವಚಿತ್ರದ  ಬಲಭಾಗದಲ್ಲಿ – ಅಶೋಕ ಸ್ಥಂಭ, ಮತ್ತು ಎಲೆಕ್ಟ್ರಾಟೈಪ್ ನಲ್ಲಿ 20 ಎಂದು ಮುದ್ರಿಸಲಾಗಿದೆ..
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago