ಶೀಘ್ರವೇ 5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಅರಗ ಜ್ಞಾನೇಂದ್ರ – Vishwanews24

Featured, ರಾಜ್ಯ ನ್ಯೂಸ್

ಶೀಘ್ರವೇ 5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಅರಗ ಜ್ಞಾನೇಂದ್ರ

ಚಿತ್ರದುರ್ಗ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ 7ನೇ ತಂಡದ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 1 ಲಕ್ಷ ಪೊಲೀಸ್ ಹುದ್ದೆಗಳ ಪೈಕಿ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ಪ್ರತಿ ವರ್ಷ ಸರಾಸರಿ 5 ಸಾವಿರ ಪೊಲೀಸ್ ಕಾನ್ಸಟೇಬಲ್ ಹುದ್ದೆಗಳನ್ನು ತುಂಬುತ್ತಾ ಬರಲಾಗಿದೆ. ಸದ್ಯ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು.

ಹುಬ್ಬಳ್ಳಿ:ಉಚಿತ ಸೇವೆ ನೀಡುವ ‘ನಮ್ಮ ಕ್ಲಿನಿಕ್‌’ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ – Vishwanews24

ರಾಜ್ಯ ಪೊಲೀಸ್ ಇಲಾಖೆ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಹರಿಯಾಣದಲ್ಲಿ ಜರುಗಿದ ಎಲ್ಲಾ ರಾಜ್ಯಗಳ ಗೃಹ ಸಚಿವರು ಹಾಗೂ ಪೊಲೀಸ್ ಮಹಾನಿರ್ದೇಶಕರ ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಪೊಲೀಸರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಪೊಲೀಸರಿಗೆ ನೂತನ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುವುದು. ಅಪರಾಧಗಳ ಪತ್ತೆಗಾಗಿ 206 ಸೀನ್ ಆಫ್ ಕ್ರೈಮ್ ಅಧಿಕಾರಿಗಳನ್ನು ನೇಮಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್.ಎಸ್.ಎಲ್) ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. 9 ಸಂಚಾರಿ ಎಫ್.ಎಸ್.ಎಲ್ ಲ್ಯಾಬ್‍ಗಳನ್ನು ಮಾಡಲಾಗಿದೆ. ಕಳೆದ ಐದಾರು ತಿಂಗಳಲ್ಲಿ ಹುಬ್ಬಳ್ಳಿ ಮತ್ತು ಬಳ್ಳಾರಿ ನೂತನ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸಲಾಗಿದೆ. ಶಿವಮೊಗ್ಗ ಹಾಗೂ ಹಾಸನದಲ್ಲಿ ಕೂಡ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ ಮಾಡಲಾಗುವುದು. ಕೇವಲ ನಾಲ್ಕೈದು ತಿಂಗಳೊಳಗೆ ಎಫ್.ಎಸ್.ಎಲ್ ವರದಿ ಬರಬೇಕು. ಇದರಿಂದ ಜಾರ್ಜ್‍ಶೀಟ್ ಹಾಕಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದರು.

ಹಿಂದುಗಳ ನೋವಿಗೆ ಧ್ವನಿಯಾಗಲು ಕಾರ್ಕಳಕ್ಕೆ ಬಂದಿದ್ದೇನೆ , ಗುರುವಿಗಾಗಿ ಈ ಬಾರಿ ಕ್ಷೇತ್ರ ತ್ಯಾಗ ಮಾಡಿ : ಸಚಿವ ಸುನಿಲ್ ಕುಮಾರ್ ಗೆ ಮುತಾಲಿಕ್ ಮನವಿ – Vishwanews24

Leave a Reply