ಚಿತ್ರದುರ್ಗ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ 7ನೇ ತಂಡದ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 1 ಲಕ್ಷ ಪೊಲೀಸ್ ಹುದ್ದೆಗಳ ಪೈಕಿ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ಪ್ರತಿ ವರ್ಷ ಸರಾಸರಿ 5 ಸಾವಿರ ಪೊಲೀಸ್ ಕಾನ್ಸಟೇಬಲ್ ಹುದ್ದೆಗಳನ್ನು ತುಂಬುತ್ತಾ ಬರಲಾಗಿದೆ. ಸದ್ಯ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು.
ರಾಜ್ಯ ಪೊಲೀಸ್ ಇಲಾಖೆ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಹರಿಯಾಣದಲ್ಲಿ ಜರುಗಿದ ಎಲ್ಲಾ ರಾಜ್ಯಗಳ ಗೃಹ ಸಚಿವರು ಹಾಗೂ ಪೊಲೀಸ್ ಮಹಾನಿರ್ದೇಶಕರ ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಪೊಲೀಸರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಪೊಲೀಸರಿಗೆ ನೂತನ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುವುದು. ಅಪರಾಧಗಳ ಪತ್ತೆಗಾಗಿ 206 ಸೀನ್ ಆಫ್ ಕ್ರೈಮ್ ಅಧಿಕಾರಿಗಳನ್ನು ನೇಮಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್.ಎಸ್.ಎಲ್) ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. 9 ಸಂಚಾರಿ ಎಫ್.ಎಸ್.ಎಲ್ ಲ್ಯಾಬ್‍ಗಳನ್ನು ಮಾಡಲಾಗಿದೆ. ಕಳೆದ ಐದಾರು ತಿಂಗಳಲ್ಲಿ ಹುಬ್ಬಳ್ಳಿ ಮತ್ತು ಬಳ್ಳಾರಿ ನೂತನ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸಲಾಗಿದೆ. ಶಿವಮೊಗ್ಗ ಹಾಗೂ ಹಾಸನದಲ್ಲಿ ಕೂಡ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ ಮಾಡಲಾಗುವುದು. ಕೇವಲ ನಾಲ್ಕೈದು ತಿಂಗಳೊಳಗೆ ಎಫ್.ಎಸ್.ಎಲ್ ವರದಿ ಬರಬೇಕು. ಇದರಿಂದ ಜಾರ್ಜ್‍ಶೀಟ್ ಹಾಕಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…