ಶೃಂಗೇರಿ : ಅಪ್ರಾಪ್ತ ಬಾಲಕಿ ಮೇಲೆ 30ಕ್ಕೂ ಹೆಚ್ಚು ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಲ್ಲಿ ಪ್ರಮುಖ ಆರೋಪಿಯ ಬಗ್ಗೆ ತಿಳಿದು ಬಂದಿದೆ. ಈ ಆರೋಪಿ ಆ ಅಪ್ರಾಪ್ತ ಬಾಲಕಿಯ ತಾಯಿಯೇ ಆಗಿದ್ದಾಳೆ ಎಂದು ವರದಿಯಾಗಿದೆ.
2021 ಜನವರಿ 30ರಂದು ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ ನಡೆಯುತ್ತಿರುವ ಬಗ್ಗೆ ವರದಿಯಾಗಿತ್ತು. ಅದೇ ದಿನ ಈ ಬಗ್ಗೆ ಪೊಲೀಸರು ಎಫ್‌ಐಆರ್ ಕೂಡಾ ದಾಖಲು ಮಾಡಿದ್ದರು. 2020 ಸೆಪ್ಟಂಬರ್ 1ರಿಂದ 2021 ಜನವರಿ 27ರವರೆಗೆ 30ಕ್ಕೂ ಹೆಚ್ಚು ಮಂದಿ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು 15 ವರ್ಷದ ಬಾಲಕಿ ದೂರಿನಲ್ಲಿ ತಿಳಿಸಿದ್ದಳು. ಈ ದೂರಿನ ಆಧಾರದಲ್ಲಿ ಪೊಲೀಸರು ಈಗಾಗಲೇ 32 ಮಂದಿಯನ್ನು ಬಂಧಿಸಿದ್ದಾರೆ.
ಉಡುಪಿ : ತೀರ್ಥಹಳ್ಳಿ – ಮಲ್ಪೆ ರಾ.ಹೆ ಅಭಿವೃದ್ದಿಗೆ ನಿತಿನ್ ಗಡ್ಕರಿ ಸೂಚನೆ : ಸಂಸದೆ ಶೋಭಾ ಕರಂದ್ಲಾಜೆ-Vishwanews24
ಈ ಪ್ರಕರಣದ ತನಿಖೆ ಸಂದರ್ಭ ಆತಂಕಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ತನ್ನ ಮಗಳ ಮೇಲೆಯೇ ಅತ್ಯಾಚಾರವೆಸಗಲು ತಾಯಿ ಅವಕಾಶ ನೀಡಿದ್ದಾಳೆ. ಇಷ್ಟರವರೆಗೆ ತಾನು ಬಾಲಕಿಯ ಚಿಕ್ಕಮ್ಮ ಎಂದು ಹೇಳಿಕೊಂಡಿದ್ದ ಆ ಮಹಿಳೆ ಆ ಬಾಲಕಿಯ ನಿಜವಾದ ತಾಯಿಯಾಗಿದ್ದಾಳೆ.
ಈ ಮಹಿಳೆಗೆ ಉತ್ತರ ಕರ್ನಾಟಕ ಜಿಲ್ಲೆಯೊಂದರಲ್ಲಿ ಮದುವೆ ಆಗಿದ್ದು ಮಗು ಜನಿಸಿದ್ದಳು. ಬಳಿಕ ಶೃಂಗೇರಿ ತಾಲೂಕಿನ ವ್ಯಕ್ತಿಯೊಬ್ಬರೊಂದಿಗೆ ವಿವಾಹವಾಗಿತ್ತು. ವಿವಾಹವಾದ ಕೆಲ ದಿನಗಳ ಬಳಿಕ ಆಕೆ ತನ್ನ ಮಗಳನ್ನು ಶೃಂಗೇರಿಗೆ ಕರೆಸಿಕೊಂಡು ತನ್ನ ಅಕ್ಕನ ಮಗಳು ಎಂದು ಹೇಳಿಕೊಂಡಿದ್ದಳು ಎಂದು ವರದಿಯಾಗಿದೆ.
ಬಳಿಕ ಎರಡನೇ ಪತಿಯಿಂದಲೂ ಈ ಮಹಿಳೆ ದೂರವಾಗಿದ್ದು ಮಗಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ ಮಗಳನ್ನು ಅನೈತಿಕ ಚಟುವಟಿಕೆಗೆ ಎಳೆದು ಆಕೆಯ ಮೇಲೆ ನಿರಂತರ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾಳೆ ಎಂದು ತನಿಖೆಯ ವೇಳೆ ತಿಳಿದು ಬಂದಿರುವುದಾಗಿ ವರದಿಯಾಗಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…