Featured

ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ; ತಾಯಿಯ ಅನುಮತಿಯಿಂದ ನಡೆಯಿತು ರೇಪ್ ! Vishwanews24‌

ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ; ತಾಯಿಯ ಅನುಮತಿಯಿಂದ ನಡೆಯಿತು ರೇಪ್ ! Vishwanews24‌

ಶೃಂಗೇರಿ : ಅಪ್ರಾಪ್ತ ಬಾಲಕಿ ಮೇಲೆ 30ಕ್ಕೂ ಹೆಚ್ಚು ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಲ್ಲಿ ಪ್ರಮುಖ ಆರೋಪಿಯ ಬಗ್ಗೆ ತಿಳಿದು ಬಂದಿದೆ. ಈ ಆರೋಪಿ ಆ ಅಪ್ರಾಪ್ತ ಬಾಲಕಿಯ ತಾಯಿಯೇ ಆಗಿದ್ದಾಳೆ ಎಂದು ವರದಿಯಾಗಿದೆ.

2021 ಜನವರಿ 30ರಂದು ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ ನಡೆಯುತ್ತಿರುವ ಬಗ್ಗೆ ವರದಿಯಾಗಿತ್ತು. ಅದೇ ದಿನ ಈ ಬಗ್ಗೆ ಪೊಲೀಸರು ಎಫ್‌ಐಆರ್‌ ಕೂಡಾ ದಾಖಲು ಮಾಡಿದ್ದರು. 2020 ಸೆಪ್ಟಂಬರ್‌ 1ರಿಂದ 2021 ಜನವರಿ 27ರವರೆಗೆ 30ಕ್ಕೂ ಹೆಚ್ಚು ಮಂದಿ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು 15 ವರ್ಷದ ಬಾಲಕಿ ದೂರಿನಲ್ಲಿ ತಿಳಿಸಿದ್ದಳು. ಈ ದೂರಿನ ಆಧಾರದಲ್ಲಿ ಪೊಲೀಸರು ಈಗಾಗಲೇ 32 ಮಂದಿಯನ್ನು ಬಂಧಿಸಿದ್ದಾರೆ.

ಉಡುಪಿ : ತೀರ್ಥಹಳ್ಳಿ – ಮಲ್ಪೆ ರಾ.ಹೆ ಅಭಿವೃದ್ದಿಗೆ ನಿತಿನ್ ಗಡ್ಕರಿ ಸೂಚನೆ : ಸಂಸದೆ ಶೋಭಾ ಕರಂದ್ಲಾಜೆ-Vishwanews24

ಈ ಪ್ರಕರಣದ ತನಿಖೆ ಸಂದರ್ಭ ಆತಂಕಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ತನ್ನ ಮಗಳ ಮೇಲೆಯೇ ಅತ್ಯಾಚಾರವೆಸಗಲು ತಾಯಿ ಅವಕಾಶ ನೀಡಿದ್ದಾಳೆ. ಇಷ್ಟರವರೆಗೆ ತಾನು ಬಾಲಕಿಯ ಚಿಕ್ಕಮ್ಮ ಎಂದು ಹೇಳಿಕೊಂಡಿದ್ದ ಆ ಮಹಿಳೆ ಆ ಬಾಲಕಿಯ ನಿಜವಾದ ತಾಯಿಯಾಗಿದ್ದಾಳೆ.

ಈ ಮಹಿಳೆಗೆ ಉತ್ತರ ಕರ್ನಾಟಕ ಜಿಲ್ಲೆಯೊಂದರಲ್ಲಿ ಮದುವೆ ಆಗಿದ್ದು ಮಗು ಜನಿಸಿದ್ದಳು. ಬಳಿಕ ಶೃಂಗೇರಿ ತಾಲೂಕಿನ ವ್ಯಕ್ತಿಯೊಬ್ಬರೊಂದಿಗೆ ವಿವಾಹವಾಗಿತ್ತು. ವಿವಾಹವಾದ ಕೆಲ ದಿನಗಳ ಬಳಿಕ ಆಕೆ ತನ್ನ ಮಗಳನ್ನು ಶೃಂಗೇರಿಗೆ ಕರೆಸಿಕೊಂಡು ತನ್ನ ಅಕ್ಕನ ಮಗಳು ಎಂದು ಹೇಳಿಕೊಂಡಿದ್ದಳು ಎಂದು ವರದಿಯಾಗಿದೆ.

ಬಳಿಕ ಎರಡನೇ ಪತಿಯಿಂದಲೂ ಈ ಮಹಿಳೆ ದೂರವಾಗಿದ್ದು ಮಗಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ ಮಗಳನ್ನು ಅನೈತಿಕ ಚಟುವಟಿಕೆಗೆ ಎಳೆದು ಆಕೆಯ ಮೇಲೆ ನಿರಂತರ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾಳೆ ಎಂದು ತನಿಖೆಯ ವೇಳೆ ತಿಳಿದು ಬಂದಿರುವುದಾಗಿ ವರದಿಯಾಗಿದೆ.

ಉಡುಪಿ : ಕೇಂದ್ರ, ರಾಜ್ಯ ಸರಕಾರಗಳ ಜನವಿರೋಧಿ ನೀತಿ ವಿರೋಧಿಸಿ ಮಾ.25ರಂದು ಕಾಪು ಉತ್ತರ ಬ್ಲಾಕ್ ಸಮಿತಿಯಿಂದ ‘ಜನಧ್ವನಿ’ ಪಾದಯಾತ್ರೆ : ವಿನಯ ಕುಮಾರ್ ಸೊರಕೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

12 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

12 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

12 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

12 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

12 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

13 hours ago