Featured

ಶೃಂಗೇರಿ : ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿ; ಶಿಕ್ಷಕರು, ಹಲವು ವಿದ್ಯಾರ್ಥಿಗಳಿಗೆ ಗಾಯ – vishwanews24

ಶೃಂಗೇರಿ : ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿ; ಶಿಕ್ಷಕರು, ಹಲವು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು : ಶೃಂಗೇರಿಯ ಕಾವಡಿ ಸಮೀಪದ ಅಗ್ರಹಾರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್‌ವೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.

ಚಳ್ಳಕೆರೆಯಿಂದ ಶೃಂಗೇರಿಗೆ ಪ್ರವಾಸಕ್ಕೆ ಬರುತ್ತಿದ್ದ ಚಳ್ಳಕೆರೆ ವಾಸವಿ ಪಿಯು ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಬಸ್‌ನಲ್ಲಿ ಇದ್ದ ಮೂವರು ಶಿಕ್ಷಕರು ಹಾಗೂ 22 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗೊತ್ತಾಗಿದೆ.

ಸಣ್ಣಪುಟ್ಟ ಗಾಯಗಳಾದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

4 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

4 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

4 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

5 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

5 hours ago