ಚಿಕ್ಕಮಗಳೂರು: ಶೃಂಗೇರಿ ವಿದ್ಯಾರ್ಥಿನಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.
ಸಂತೋಷ್, ಪ್ರದೀಪ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ.
2016ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿ, ಕೊಂದು ಪಾಳು ಬಾವಿಗೆ ಎಸೆಯಲಾಗಿತ್ತು. ಈ ಘಟನೆ ಚಿಕ್ಕಮಗಳೂರು ಮಾತ್ರವಲ್ಲದೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮೆಣಸೆಯಿಂದ ಕಾಲುದಾರಿಯಲ್ಲಿ ಮನೆಗೆ ಹೋಗುತ್ತಿದ್ದ ಬಿಕಾಂ ವಿದ್ಯಾರ್ಥಿನಿಯನ್ನು ಎಳೆದೊಯ್ದಿದ್ದ ಅದೇ ಊರಿನ ಯುವಕರು ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿ, 50 ಅಡಿಯ ಬಾವಿಯಲ್ಲಿ ಎಸೆದು ಹೋಗಿದ್ದರು.
ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತೋಷ್, ಪ್ರದೀಪ್ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಗಲ್ಲು ಶಿಕ್ಷೆ ವಿಧಿಸಿ ಚಿಕ್ಕಮಗಳೂರು ಪ್ರಧಾನ ನ್ಯಾಯಾಲಯ ಆದೇಶ ಹೊರಡಿಸಿದೆ. 4 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆದಿತ್ತು. ಇಂದು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ತೀರ್ಪು ಪ್ರಕಟಗೊಳಿಸಿದ್ದಾರೆ. ಮೃತ ಯುವತಿಯ ಪರ ಹಿರಿಯ ವಕೀಲ ವಿ.ಜಿ. ಯಲಕೇರಿ ವಾದ ಮಂಡಿಸಿ, ಮರಣದಂಡನೆ ವಿಧಿಸುವಂತೆ ಕೋರ್ಟ್ಗೆ ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿರುವ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ಘೋಷಿಸಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…