ಶೃಂಗೇರಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ಪ್ರಕಟ -Vishwanews24

ಚಿಕ್ಕಮಗಳೂರು: ಶೃಂಗೇರಿ ವಿದ್ಯಾರ್ಥಿನಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಉಮೇಶ್‌ ಎಂ ಅಡಿಗ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಸಂತೋಷ್‌, ಪ್ರದೀಪ್‌ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ.

2016ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿ, ಕೊಂದು ಪಾಳು ಬಾವಿಗೆ ಎಸೆಯಲಾಗಿತ್ತು. ಈ ಘಟನೆ ಚಿಕ್ಕಮಗಳೂರು ಮಾತ್ರವಲ್ಲದೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮೆಣಸೆಯಿಂದ ಕಾಲುದಾರಿಯಲ್ಲಿ ಮನೆಗೆ ಹೋಗುತ್ತಿದ್ದ ಬಿಕಾಂ ವಿದ್ಯಾರ್ಥಿನಿಯನ್ನು ಎಳೆದೊಯ್ದಿದ್ದ ಅದೇ ಊರಿನ ಯುವಕರು ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿ, 50 ಅಡಿಯ ಬಾವಿಯಲ್ಲಿ ಎಸೆದು ಹೋಗಿದ್ದರು.

ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತೋಷ್, ಪ್ರದೀಪ್ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಗಲ್ಲು ಶಿಕ್ಷೆ ವಿಧಿಸಿ ಚಿಕ್ಕಮಗಳೂರು ಪ್ರಧಾನ ನ್ಯಾಯಾಲಯ ಆದೇಶ ಹೊರಡಿಸಿದೆ. 4 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆದಿತ್ತು. ಇಂದು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ತೀರ್ಪು ಪ್ರಕಟಗೊಳಿಸಿದ್ದಾರೆ. ಮೃತ ಯುವತಿಯ ಪರ ಹಿರಿಯ ವಕೀಲ ವಿ.ಜಿ. ಯಲಕೇರಿ ವಾದ ಮಂಡಿಸಿ, ಮರಣದಂಡನೆ ವಿಧಿಸುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿರುವ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ಘೋಷಿಸಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago