ಚಿಕ್ಕಬಳ್ಳಾಪುರ: ಶೇಕಡಾ 50 ರಷ್ಟು ಮಾತ್ರ ಮುಸ್ಲಿಮರು ಮತದಾನ ಮಾಡುತ್ತಿದ್ದಾರೆ. ಇನ್ನುಳಿದ 50 ಶೇಕಡಾ ಮುಸ್ಲಿಂ ಬಾಂಧವರು ಮತದಾನ ಮಾಡುತ್ತಿಲ್ಲ, ಹೀಗಾಗಿ ಕಳೆದ ಬಾರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಬಾಗೇಪಲ್ಲಿಯಲ್ಲಿ ಮಂಗಳವಾರ ಶಾದಿಮಹಲ್ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿರುವ ಶೇಕಡಾ 90 ರಷ್ಟು ಮುಸ್ಲಿಮರು ಮತದಾನ ಮಾಡಿದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ರಾಹುಲ್ ಗಾಂಧಿ ಅವರು ಮುಂದಿನ ಪ್ರಧಾನಿಯಾಗಲಿದ್ದಾರೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂದರು.
ಈ ಬಾರಿ ಶೇ.90ರಷ್ಟು ಮುಸ್ಲಿಂ ಬಾಂಧವರು ಮತದಾನ ಮಾಡಿದರೆ ಈ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಲ್ಲದೇ ರಾಹುಲ್ ಗಾಂಧಿಯೇ ಮುಂದಿನ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಮುಂದಿನ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲು ತಯಾರಾಗಿರುವ ಸಂಸದ ವೀರಪ್ಪ ಮೊಯ್ಲಿಗೆ ಅವರಿಗೆ ಮತ ನೀಡುವಂತೆ ಜಮೀರ್ ಅವರು ಚುನಾವಣಾ ಪ್ರಚಾರ ನಡೆಸಿದರು.
ಪುಲ್ವಮಾ ಉಗ್ರ ದಾಳಿ ಕುರಿತು ಮಾತನಾಡಿದ ಅವರು ಹುತಾತ್ಮ ಯೋಧರಲ್ಲಿ ಓರ್ವ ಮುಸ್ಲಿಂ ಯೋಧನೂ ಇದ್ದ. ನಾವೆಲ್ಲರೂ ಹಿಂದೂಸ್ಥಾನದವರು ಇಂತಹ ದಾಳಿಯನ್ನು ಖಂಡಿಸಬೇಕು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…