ಕಾಪು: ಸುಡುಗಾಡು – ಕುಗ್ರಾಮ ಎಂದೇ ಪ್ರಸಿದ್ಧಿ ಹೊಂದಿದ್ದ, ಜಿಲ್ಲೆಯಲ್ಲಿಯೇ ಅತೀ ಕಡಿಮೆ ಆದಾಯ ಹೊಂದಿರುವ ಕಂದಾಯ ಗ್ರಾಮವಾಗಿರುವ ಬೆಳಪು ಇದೀಗ ಅಭಿವೃದ್ಧಿಯಲ್ಲಿ ಸರಕಾರ ಮತ್ತು ಸರಕಾರೇತರ ಯೋಜನೆಗಳ ಅನುಷ್ಠಾನದಲ್ಲಿ ಮಾದರಿಯಾಗಿ ಮೂಡಿ ಬರುತ್ತಿದೆ.
ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿಗೊಳ್ಳುತ್ತಿರುವ ಬೆಳಪು ಗ್ರಾಮದಲ್ಲಿ ಅತ್ಯಾಧುನಿಕ ಸಂಶೋಧನಾ ಕೇಂದ್ರ, ಪಿ.ಜಿ. ಸೆಂಟರ್, ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಮತ್ತು ಕೈಗಾರಿಕಾ ಪಾರ್ಕ್ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಕಾರ್ಯಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ.
ಬೆಳಪು ಮತ್ತು ಸುತ್ತಲಿನ ಗ್ರಾಮಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶವನ್ನು ಅವಲಂಬಿಸುವ ಕಾಲವಿತ್ತು. ಆದರೆ ಇದೀಗ ಬೆಳಪು ಗ್ರಾಮದಲ್ಲಿ ಉನ್ನತ ಶಿಕ್ಷಣದೊಂದಿಗೆ ತಾಂತ್ರಿಕ ಶಿಕ್ಷಣ, ಸಂಶೋಧನಾ ಶಿಕ್ಷಣಕ್ಕೆ ಅವಕಾಶ ಒದಗಿಸಿಕೊಡುವ ಯೋಜನೆಗಳು ಅನುಷ್ಠಾನಗೊಳ್ಳುತ್ತಿರುವುದು ದೇಶ ದಲ್ಲಿಯೇ ಪ್ರಥಮದ್ದಾಗಿದೆ.
ಮಂಗಳೂರು ವಿಶ್ವ ವಿದ್ಯಾಲಯ ಸಂಯೋಜಿತ ಅತ್ಯಾಧುನಿಕ ಸಂಶೋಧನಾ ಕೇಂದ್ರದ ನಿರ್ಮಾಣ ಕಾಮಗಾರಿಯ ಪ್ರಥಮ ಹಂತದಲ್ಲಿ ಕಾಮಗಾರಿಯು ನಡೆಯುತ್ತಿದ್ದು, 49.25 ಕೋಟಿ ರೂ. ವೆಚ್ಚದ ಬಹುಮಹಡಿ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದೆ. ಕರ್ನಾಟಕ ಹೌಸಿಂಗ್ ಬೋರ್ಡ್‌ನ ಮೂಲಕ ಸಂಶೋಧನಾ ಕೇಂದ್ರದ ಕಾಮಗಾರಿ ನಡೆಯುತ್ತಿದ್ದು ಕಾಪು ದೇವಿಪ್ರಸಾದ್ ಕನ್‌ಸ್ಟÅಕ್ಷನ್ಸ್‌ನ ಕೆ. ವಾಸುದೇವ ಶೆಟ್ಟಿ ಅವರು ಕಾಮಗಾರಿಯ ಗುತ್ತಿಗೆ ವಹಿಸಿ ಕೊಂಡಿದ್ದಾರೆ.
ಬೆಳಪು ಗ್ರಾಮದ ಜನತೆಯ ಬಹುಕಾಲದ ಕನಸು ಈಗ ನನಸಾಗುತ್ತಿದೆ. ತ್ರವಳಿ ಬೃಹತ್ ಯೋಜನೆಗಳು ಏಕಕಾಲದಲ್ಲಿ, ಒಂದೇ ಗ್ರಾಮದಲ್ಲಿ ಕಾರ್ಯಗತಗೊಳ್ಳುತ್ತಿದ್ದು, ಆ ಮೂಲಕ ನಮ್ಮ ಹೋರಾಟಕ್ಕೆ ಫಲ ಸಿಕ್ಕಿದೆ. ಈ ಯೋಜನೆಗಳು ಮುಂದಿನ ಯುವ ಪೀಳಿಗೆಗೆ ಆದರ್ಶವಾಗುವ ಯೋಜನೆಗಳಾಗಿದ್ದು ಗ್ರಾಮೀಣಾಭಿವೃದ್ಧಿಯಲ್ಲಿ ದೀರ್ಘಕಾಲ ಸಲ್ಲಿಸಿರುವ ಸೇವೆಗೆ ಈಗ ಸಾರ್ಥಕವಾಗಿದೆ. ಗಾಂಧೀಜಿಯವರ ಗ್ರಾಮ ರಾಜ್ಯದ ಕನಸು ನನಸಾಗುತ್ತಿದ್ದು, ಗಾಂಧಿ – 150 ಕಾರ್ಯಕ್ರಮಕ್ಕೆ ಪೂರಕವಾಗಿ ಬೆಳಪುವಿನಲ್ಲಿ ಗಾಂಧಿ ಗ್ರಾಮ ಸ್ಥಾಪಿಸುವ ಕಲ್ಪನೆ ನಮ್ಮದಾಗಿದೆ.
-ಡಾ| ದೇವಿಪ್ರಸಾದ್ ಶೆಟ್ಟಿ, ಅಧ್ಯಕ್ಷರು, ಬೆಳಪು ಗ್ರಾಮ ಪಂಚಾಯತ್
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…